ಕಡೂರು: ಅಹಿಂಸೆ, ಶಾಂತಿಯ ಮೂಲಕ ಸತ್ಯಾಗ್ರಹದ ಹಾದಿ ತೋರಿದ ಗಾಂಧೀಜಿಯ ವಿಚಾರಧಾರೆ ಸದಾ ಪ್ರಸ್ತುತ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾತ್ಮರನ್ನು ಸ್ಮರಿಸುವುದು ಮತ್ತು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ದೇಶ ಕಂಡ ಸ್ವಚ್ಛ ಹಾಗೂ ಜನಮನದಲ್ಲಿ ಚಿರಸ್ಥಾಯಿಯಾಗುವಂತಹ ನಿಸ್ಪೃಹ ಆಡಳಿತ ನೀಡಿದ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರು ರೈತರು ಮತ್ತು ಸೈನಿಕರು ದೇಶದ ಬೆನ್ನೆಲುಬು ಎಂದು ಅರಿತು ‘ಜೈ ಜವಾನ್-ಜೈಕಿಸಾನ್ʼ ಸಂದೇಶದ ಮೂಲಕ ಭಾರತವನ್ನೇ ಎಚ್ಚರಿಸಿದ್ದರು ಎಂಬುದನ್ನು ಸ್ಮರಿಸಬೇಕು ಎಂದರು.
ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ಮಾತನಾಡಿದರು.
ಶಿಕ್ಷಣ ಸಂಯೋಜಕ ನಾಗರಾಜು ಗಾಂಧೀಜಿ ಮತ್ತು ಶಾಸ್ತ್ರೀಜಿ ಕುರಿತು ಉಪನ್ಯಾಸ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ತಿಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕು ಬಿಸಿಎಂ ಅಧಿಕಾರಿ ಎಸ್.ಎಸ್.ದೇವರಾಜ್, ಬೀರೂರು ಶೈಕ್ಷಣಿಕ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬುರ್ಹನುದ್ದಿನ್ ಚೋಪ್‌ದಾರ್, ಕಡೂರು ವೃತ್ತ ನಿರೀಕ್ಷಕ ರಫೀಕ್ ಎಂ., ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.