ADVERTISEMENT

ಬಾಲಕಿ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 2:19 IST
Last Updated 11 ಫೆಬ್ರುವರಿ 2021, 2:19 IST

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ 15 ವರ್ಷದ ಬಾಲಕಿಯ ಮೇಲಿನ ಸತತ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಕಾಂಚಿನಗರದ ಚಾಲಕ ಯತೀಶ್‌ ಕುಮಾರ್‌ (42) ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿಯು ಬಾಲಕಿಗೆ ಪದೇಪದೇ ಫೋನ್‌ ಮಾಡಿರುವುದು, ವಿಡಿಯೋ–ಫೋಟೊ ಕಳಿಸುವಂತೆ ಪೀಡಿಸಿರುವುದು, ಲೈಂಗಿಕ ಕಿರುಕುಳ ನೀಡಿರುವ ದೂರುಗಳಿವೆ. ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಬ್ಲಾಕ್‌ ಲಿಸ್ಟ್‌’ನಲ್ಲಿ 200ಕ್ಕೂ ಹೆಚ್ಚು ಸಂಖ್ಯೆ: ಬಾಲಕಿಯು 200ಕ್ಕೂ ಹೆಚ್ಚು ಫೋನ್‌ ನಂಬರ್‌ಗಳನ್ನು ಬ್ಲಾಕ್‌ ಲಿಸ್ಟ್‌ಗೆ ಸೇರಿಸಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋನ್‌ ಕರೆ ವಿವರ (ಸಿಡಿಆರ್‌) ಆಧರಿಸಿ ಬಾಲಕಿಯ ಸಂಪರ್ಕದಲ್ಲಿದ್ದವರ ಮಾಹಿತಿ ಕಲೆ ಹಾಕಲಾಗುತ್ತಿದೆ. ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ‘ಫೋನ್‌ ಪೇ’, ‘ಗೂಗಲ್‌ ಪೇ’ ವಿವರ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.