
ಪ್ರಜಾವಾಣಿ ವಾರ್ತೆ
ಕೊಪ್ಪ: ತಾಲ್ಲೂಕಿನ ಕೆಸುವೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಕೆಲಕುಳಿ ಗ್ರಾಮದ ನಿವಾಸಿ, ಮೆಸ್ಕಾಂ ಲೈನ್ ಮ್ಯಾನ್ ಆದರ್ಶ ಅವರ ಮನೆಯಲ್ಲಿ ಬುಧವಾರ ನಗದು ಚಿನ್ನಾಭರಣ ಕಳವು ನಡೆದಿರುವ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಗಲು ಹೊತ್ತಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲ ಬೀಗ ಮುರಿದ ಕಳ್ಳರು ಒಟ್ಟು 65 ಗ್ರಾಂ. ಚಿನ್ನ, ರೂ.55 ಸಾವಿರ ನಗದು ಕಳವು ಮಾಡಿದ್ದಾರೆ ಎಂದು ಆದರ್ಶ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.