
ತರೀಕೆರೆ: ಯರೇಹಳ್ಳಿ ತಾಂಡ್ಯಾದ ಆಶಾ ಎಂಬುವರ ಮನೆಯಲ್ಲಿ ಬುಧವಾರ (ನ. 19) ಮನೆಯ ಮೇಲ್ಭಾಗದ ಶೀಟ್ ತೆಗೆದು ಒಳ ನುಗ್ಗಿ 96 ಗ್ರಾಂ ಚಿನ್ನಾಭರಣ, ₹8 ಸಾವಿರ ನಗದು ಕಳ್ಳತನವಾಗಿದ್ದು, ಈ ಬಗ್ಗೆ ತರೀಕೆರೆ ಪೊಲಿಸ್ ಠಾಣೆಗೆ ದೂರು ದಾಖಲಿಸಿದ್ದರು.
ಆರೋಪಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚಿಸಿದ್ದು, ತರೀಕೆರೆ ಪೊಲೀಸ್ ಠಾಣಾ ಅಧಿಕಾರಿ, ಸಿಬ್ಬಂದಿಯ ವಿಶೇಷ ತಂಡ ರಚಿಸಲಾಗಿತ್ತು. ತಂಡವು ಆರೋಪಿಗಳಾದ ಅದೇ ಗ್ರಾಮದ ರಾಮಕೃಷ್ಣ, ಮೇಘರಾಜ್ ಎಂಬುವರನ್ನು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅವರಿಂದ ₹9.63 ಲಕ್ಷ ಮೌಲ್ಯದ ಚಿನ್ನಾಭರಣ, ₹4,400 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಎಸ್‍ಪಿ ವಿಕ್ರಂ ಅಮಟೆ, ಎಎಸ್‌ಪಿ ಸಿ.ಟಿ. ಜಯಕುಮಾರ್, ಡಿವೈಎಸ್‍ಪಿ ಪರಶುರಾಮಪ್ಪ ಮಾರ್ಗದರ್ಶನದಲ್ಲಿ ತರೀಕೆರೆ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್, ಪಿಎಸ್ಐಗಳಾದ ಮಂಜುನಾಥ್, ಮನ್ನಂಗಿ, ದೇವೇಂದ್ರ ರಾಥೋಡ್, ಸಿಬ್ಬಂದಿ ಎಚ್.ಸಿ. ರಾಮಪ್ಪ, ರುದ್ರೇಶ್, ರಿಯಾಜ್, ಧನಂಜಯ ಸ್ವಾಮಿ, ಶ್ರೀನಿವಾಸ, ಜಿಲ್ಲಾ ಕಚೇರಿ ತಾಂತ್ರಿಕ ಸಿಬ್ಬಂದಿ ರಬ್ಬಾನಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.