ADVERTISEMENT

ಗೋಣಿಬೀಡು: ಆರೋಗ್ಯ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2025, 14:35 IST
Last Updated 28 ಫೆಬ್ರುವರಿ 2025, 14:35 IST
ಮೂಡಿಗೆರೆ ತಾಲ್ಲೂಕಿನ ಗೋಣಿಬೀಡಿನಲ್ಲಿ ರೋಟರಿ ಸಂಸ್ಥೆ ವತಿಯಿಂದ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣಚೂರು ಆಸ್ಪತ್ರೆ ವೈದ್ಯರು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು
ಮೂಡಿಗೆರೆ ತಾಲ್ಲೂಕಿನ ಗೋಣಿಬೀಡಿನಲ್ಲಿ ರೋಟರಿ ಸಂಸ್ಥೆ ವತಿಯಿಂದ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣಚೂರು ಆಸ್ಪತ್ರೆ ವೈದ್ಯರು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು   

ಮೂಡಿಗೆರೆ: ‘ಆರೋಗ್ಯವಂತನೇ ಇಂದಿನ ಸಮಾಜದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿ’ ಎಂದು ಮಂಗಳೂರಿನ ಕಣಚೂರು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ರಹಿಮಾನ್ ಹೇಳಿದರು.

‌ತಾಲ್ಲೂಕಿನ ಗೋಣಿಬೀಡಿನಲ್ಲಿ ರೋಟರಿ ಸಂಸ್ಥೆ ಹಾಗೂ ಮಂಗಳೂರಿನ ಕಣಚೂರು ಆಸ್ಪತ್ರೆ ವತಿಯಿಂದ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಮಂಗನಕಾಯಿಲೆ, ಡೆಂಗಿ, ಹೃದಯ ಹಾಗೂ ಕಿಡ್ನಿ ಸಮಸ್ಯೆ, ಮಧುಮೇಹ ಜನರನ್ನು ಬಾಧಿಸುತ್ತಿದೆ. ಅಂಥವರಿಗೆ ನೆರವಾಗಲು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತಿದೆ. ಮಲೆನಾಡು ಭಾಗಗಳಲ್ಲಿ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಆಗಾಗ ಆರೋಗ್ಯ ತಪಾಸಣಾ ಶಿಬಿರ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ADVERTISEMENT

ರೋಟರಿ ಸಂಸ್ಥೆ ಗೋಣಿಬೀಡು ಘಟಕದ ಅಧ್ಯಕ್ಷ ಎಚ್.ಎಸ್.ಪ್ರಸನ್ನ ಮಾತನಾಡಿ, ಆರೋಗ್ಯ ತಪಾಸಣೆ, ನೇತ್ರ ತಪಾಸಣೆ, ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರವನ್ನು ಗೋಣೀಬೀಡಿನಲ್ಲಿ ರೋಟರಿ ಸಂಸ್ಥೆಯಿಂದ ಆಗಾಗ ಆಯೋಜಿಸುತ್ತಿದ್ದೇವೆ. ಇದರಿಂದ ಈ ಭಾಗದ ರೋಗಿಗಳಿಗೆ ಪ್ರಯೋಜನವಾಗುತ್ತಿದೆ ಎಂದರು.

ಕಣಚೂರು ಆಸ್ಪತ್ರೆ ತಜ್ಞ ವೈದ್ಯರಾದ ಡಾ.ಶ್ರೀಕಾಂತ್ ಹೆಗ್ಡೆ, ಡಾ.ಅಶೋಕ್, ಗೋಣೀಬೀಡು ಪಿಎಚ್‍ಸಿ ವೈದ್ಯಾಧಿಕಾರಿ ಡಾ.ನಿದರ್ಶನ್, ಕಣಚೂರು ಆಸ್ಪತ್ರೆಯ ಅಸ್ಗರ್ ಅಲಿ, ರೋಟರಿ ಸಂಸ್ಥೆ ಕಾರ್ಯದರ್ಶಿ ರತನ್ ಮಣ್ಣಿಕೆರೆ, ಮುಖಂಡರಾದ ಕೆ.ಟಿ.ಜಗದೀಶ್, ಎಂ.ಸಿ.ನಾಗೇಶ್, ಬಿ.ಎಸ್.ಓಂಕಾರ್, ಸವಿನ್, ವರದೇಗೌಡ, ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ಆನಂದ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.