ADVERTISEMENT

ಗ್ರಾ.ಪಂ ಚುನಾವಣೆ; ಮತ ಎಣಿಕೆ ಇಂದು

257 ಸ್ಥಾನಗಳಿಗೆ 663 ಅಭ್ಯರ್ಥಿಗಳು ಕಣದಲ್ಲಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 15:41 IST
Last Updated 30 ಮಾರ್ಚ್ 2021, 15:41 IST
ಚಿಕ್ಕಮಗಳೂರಿನ ಬೇಲೂರು ರಸ್ತೆಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಮತ ಎಣಿಕೆಗೆ ಟೇಬಲ್‌ಗಳನ್ನು ಸಿಬ್ಬಂದಿ ಸಜ್ಜುಗೊಳಿಸಿದರು. –ಪ್ರಜಾವಾಣಿ ಚಿತ್ರ
ಚಿಕ್ಕಮಗಳೂರಿನ ಬೇಲೂರು ರಸ್ತೆಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಮತ ಎಣಿಕೆಗೆ ಟೇಬಲ್‌ಗಳನ್ನು ಸಿಬ್ಬಂದಿ ಸಜ್ಜುಗೊಳಿಸಿದರು. –ಪ್ರಜಾವಾಣಿ ಚಿತ್ರ   

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿಗಳ ಚುನಾವಣೆ ಮತ ಎಣಿಕೆ ಬುಧವಾರ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಎಣಿಕೆ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಳಿಗ್ಗೆ 8 ಗಂಟೆಗೆ ಎಣಿಕೆ ಪ್ರಕ್ರಿಯೆ ಶುರುವಾಗಲಿದೆ. 32ಪಂಚಾಯಿತಿಗಳ 257 ಸ್ಥಾನಗಳಿಗೆ 663 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಚಿಕ್ಕಮಗಳೂರಿನಲ್ಲಿ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಣಿಕೆ ನಡೆಯಲಿದೆ. ಒಟ್ಟು 65 ಮತಗಟ್ಟೆಗಳು ಇವೆ. 18 ಟೇಬಲ್‌ ವ್ಯವಸ್ಥೆ ಮಾಡಲಾಗಿದೆ. 63ಸಿಬ್ಬಂದಿ ನಿಯೋಜಿಸಲಾಗಿದೆ.

ADVERTISEMENT

ಮೂಡಿಗೆರೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ಎಣಿಕೆ ನಡೆಯಲಿದೆ. 22 ಮತಗಟ್ಟೆಗಳು ಇವೆ. ಆರು ಟೇಬಲ್‌ ವ್ಯವಸ್ಥೆ ಮಾಡಲಾಗಿದೆ. 21 ಸಿಬ್ಬಂದಿ ನಿಯೋಜಿಸಲಾಗಿದೆ.

ಕೊಪ್ಪದಲ್ಲಿ ತಾಲ್ಲೂಕು ಕಚೇರಿಯಲ್ಲಿ ಎಣಿಕೆ ವ್ಯವಸ್ಥೆ ಮಾಡಲಾಗಿದೆ. 11 ಮತಗಟ್ಟೆಗಳಿದ್ದು, 12 ಸಿಬ್ಬಂದಿ ನಿಯೋಜಿಸಲಾಗಿದೆ.

ಕಡೂರಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಎಣಿಕೆ ನಡೆಯಲಿದೆ. 33 ಮತಗಟ್ಟೆಗಳು ಇವೆ. 11 ಟೇಬಲ್‌ ವ್ಯವಸ್ಥೆ ಮಾಡಲಾಗಿದೆ. 39 ಸಿಬ್ಬಂದಿ ನಿಯೋಜಿಸಲಾಗಿದೆ.

ಎನ್‌.ಆರ್‌.ಪುರದಲ್ಲಿ ತಾಲ್ಲೂಕು ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದೆ. 15 ಮತಗಟ್ಟೆಗಳು ಇವೆ. ನಾಲ್ಕು ಟೇಬಲ್‌ ವ್ಯವಸ್ಥೆ ಮಾಡಲಾಗಿದೆ. ಒಟ್ಟು 15 ಸಿಬ್ಬಂದಿ ನಿಯೋಜಿಸಲಾಗಿದೆ.

ಒಟ್ಟಾರೆ 146 ಮತಗಟ್ಟೆಗಳು ಇವೆ. 42 ಟೇಬಲ್‌ ವ್ಯವಸ್ಥೆ ಮಾಡಲಾಗಿದೆ. 150 ಸಿಬ್ಬಂದಿ ನಿಯೋಜಿಸಲಾಗಿದೆ. ಕೇಂದ್ರಗಳಲ್ಲಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ.

ಮೇಗೆ ಅವಧಿ ಮುಗಿಯುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಮತ್ತು ವಿವಿಧ ಕಾರಣಗಳಿಂದ ಖಾಲಿ ಸ್ಥಾನಗಳು ಇರುವ ಪಂಚಾಯತಿಗಳಿಗೆ ಉಪಚುನಾವಣೆ ಮತದಾನ 29ರಂದು ನಡೆದಿತ್ತು. ಸಾರ್ವತ್ರಿಕ ಚುನಾವಣೆ ಶೇ 81.42 ಹಾಗೂ ಉಪಚುನಾವಣೆ ಶೇ 77.22 ಮತದಾನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.