ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಟದೂರಿನಲ್ಲಿ ಮಹಿಳೆಯೊಬ್ಬರು ಶುಕ್ರವಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಟದೂರಿನ ಸುನೀತಾ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ಪತಿ ಕರೆದುಕೊಂಡು ಹೋಗಿಲ್ಲವೆಂಬ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಅಭಿಷೇಕ್, ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಸುನೀತಾ ಪತಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಶುಕ್ರವಾರ ರಾತ್ರಿ ಕಾಣೆಯಾಗಿದ್ದ ಅವರು, ಶನಿವಾರ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.