ADVERTISEMENT

ಕಡೂರು| ಪಾದಮನೆ ಗುಡ್ಡದಲ್ಲಿ ಬೆಂಕಿ: ಹೊತ್ತಿ ಉರಿದ ಒಣಹುಲ್ಲು

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 4:50 IST
Last Updated 7 ಜನವರಿ 2026, 4:50 IST
ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಪಾದಮನೆ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು
ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಪಾದಮನೆ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು   

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿಯ ಪಾದಮನೆ ಗ್ರಾಮದ ಬಳಿ ಇರುವ ಬೆಟ್ಟದಲ್ಲಿ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಒಣಗಿದ ಹುಲ್ಲುಸುಟ್ಟು ಹೋಗಿದೆ.

ನಿರಂತರ ಗಾಳಿಯಿಂದ ಸಂಜೆ ವೇಳೆ ಗುಡ್ಡದಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯ ಪ್ರವೃತ್ತರಾಗುವ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆದಿದೆ.  ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಗಿದೆ. ಸುಮಾರು ಎರಡು ಎಕರೆಯಷ್ಚು ಹುಲ್ಲು ಬೆಂಕಿಗೆ ಆಹುತಿಯಾಗಿದೆ. ಹೆಚ್ಚಿನ ಪ್ರಮಾಣದ ಹಾನಿ ಆಗಿಲ್ಲ. ಘಟನೆಗೆ ಕಾರಣ ತಿಳಿದು ಬಂದಿಲ್ಲ ಎಂದು ವಲಯ ಅರಣ್ಯಾಧಿಕಾರಿ ಹರೀಶ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕೆ.ಎಸ್.ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.