ADVERTISEMENT

Gruha Jyothi: ಉಚಿತ ವಿದ್ಯುತ್ ಪಡೆಯಲು ಬೇಗ ಅರ್ಜಿ‌ ಸಲ್ಲಿಸಬೇಕು –ಸಚಿವ ಕೆ.ಜೆ ಜಾರ್ಜ್

​ಪ್ರಜಾವಾಣಿ ವಾರ್ತೆ
Published 1 ಜುಲೈ 2023, 7:21 IST
Last Updated 1 ಜುಲೈ 2023, 7:21 IST
 ಕೆ.ಜೆ. ಜಾರ್ಜ್
ಕೆ.ಜೆ. ಜಾರ್ಜ್    

ಚಿಕ್ಕಮಗಳೂರು: ಗೃಹ ಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಅರ್ಜಿ ಸಲ್ಲಿಸದವರು ಕೂಡಲೇ ಸಲ್ಲಿಸಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜುಲೈ 1ರಿಂದ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುವುದು. ಈ ತಿಂಗಳು ಕೊನೆಗೆ ಎಲ್ಲರಿಗೂ ಬಿಲ್ ಬರುತ್ತದೆ. ಅರ್ಜಿ ಸಲ್ಲಿಸಲು ಜುಲೈ ಅಂತ್ಯದವರೆಗೆ ಅವಕಾಶ ಇದ್ದು, ಅರ್ಹರು ಆಗಸ್ಟ್‌ನಿಂದ ಯೋಜನೆ ವ್ಯಾಪ್ತಿಗೆ ಒಳಪಡಲಿದ್ದಾರೆ' ಎಂದು ತಿಳಿಸಿದರು.

ಅರ್ಜಿ ಹಾಕದವರು ಬೇಗ ಹಾಕಬೇಕು. ಕೆಪಿಟಿಸಿಎಲ್ ಕಚೇರಿಗೆ ಹೋಗಿ ಅರ್ಜಿ ಸಲ್ಲಿಸಬಹುದು. ಈಗ ಅಷ್ಟು ಸಮಸ್ಯೆ ಇಲ್ಲ, ಒತ್ತಡ ಕಡಿಮೆ ಆಗಿದೆ. ಅರ್ಜಿ ಹಾಕದವರಿಗೆ ಉಚಿತ ವಿದ್ಯುತ್ ಸಿಗಲ್ಲ.

ADVERTISEMENT

ಅರ್ಜಿ ಹಾಕುವುದು ತಡವಾದರೆ ಸೌಲಭ್ಯ ಸಿಗುವುದು ತಡವಾಗುತ್ತದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.