ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕಿನ ಕೆರೆಕಟ್ಟೆಯ ಹುಲಗಾರುಬೈಲು ಸಮೀಪದ ಅರಣ್ಯದಲ್ಲಿ ಒಂದು ನಾಡ ಬಂದೂಕು, 10 ಖಾಲಿ ಕಾಟ್ರೇಜ್ ಪತ್ತೆಯಾಗಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಐವರು ನಕ್ಸಲರು ಶರಣಾಗಿದ್ದರು. ಕೆಲವು ದಿನಗಳ ಹಿಂದೆ ಮಾವೋವಾದಿ ಕೋಟೆಹೊಂಡ ರವೀಂದ್ರ ಕೂಡ ಚಿಕ್ಕಮಗಳೂರು ಜಿಲ್ಲಾಡಳಿತದ ಎದುರು ಶಸ್ತ್ರಾಸ್ತ್ರ ರಹಿತರಾಗಿ ಶರಣಾಗಿದ್ದರು. ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈಗ ಪತ್ತೆಯಾಗಿರುವ ನಾಡ ಬಂದೂಕು ಯಾರಿಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.