ಮೂಡಿಗೆರೆ: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಮಂಗಳವಾರ ಆಲಿಕಲ್ಲು ಮಳೆಯಾಯಿತು.
ಕೊಟ್ಟಿಗೆಹಾರ, ಬಾಳೂರು, ಬಣಕಲ್, ಚೇಗು, ವಿಲೇಜು, ಗುತ್ತಿ, ಹೆಸಗೋಡು, ತ್ರಿಪುರ, ಬಿ. ಹೊಸಳ್ಳಿ, ಕುಂದೂರು ಭಾಗಗಳಲ್ಲಿ ಮಳೆಯ ಪ್ರಮಾಣ ಅಧಿಕವಾಗಿತ್ತು. ಮಳೆಯೊಂದಿಗೆ ಗುಡುಗು, ಸಿಡಿಲು, ಆಲಿಕಲ್ಲು, ಗಾಳಿ ಬೀಸಿದ್ದರಿಂದ ಅಪಾರ ಹಾನಿ ಸಂಭವಿಸಿದೆ. ಮಂಗಳವಾರ ಇಡೀ ದಿನ ಬಿಸಿಲಿನ ವಾತಾವರಣವಿದ್ದು, ಮಧ್ಯಾಹ್ನ 3ಗಂಟೆಗೆ ಮೋಡ ಕವಿದು ಮಳೆ ಆರಂಭವಾಯಿತು. ಆಲಿಕಲ್ಲು ಮಳೆ ಸುರಿದಿದ್ದರಿಂದ ಮಾವು, ಶುಂಠಿ ಬೆಳೆಗೆ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.