ADVERTISEMENT

ಚಿಕ್ಕಮಗಳೂರು: ದೇಶಭಕ್ತಿಗೀತೆ, ನಾಡಗೀತೆ, ರಾಷ್ಟ್ರಗೀತೆ ಗಾಯನ ಸಿರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ‘ಅಮೃತ ಗಾಯನ’

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 4:12 IST
Last Updated 14 ಆಗಸ್ಟ್ 2022, 4:12 IST
ಚಿಕ್ಕಮಗಳೂರಿನ ಜಿಲ್ಲಾ ಆಟದ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ‘ಅಮೃತ ಗಾಯನ’ದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು
ಚಿಕ್ಕಮಗಳೂರಿನ ಜಿಲ್ಲಾ ಆಟದ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ‘ಅಮೃತ ಗಾಯನ’ದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು   

ಚಿಕ್ಕಮಗಳೂರು: ಸ್ವಾತಂತ್ರ್ಯದ 75ನೇ ವರ್ಷಾಚರಣೆ ಪ್ರಯುಕ್ತ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ‘ಅಮೃತ ಗಾಯನ’ದಲ್ಲಿ ದೇಶಭಕ್ತಿಗೀತೆ, ನಾಡಗೀತೆ, ರಾಷ್ಟ್ರಗೀತೆ ಮೊಳಗಿದವು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ಪ್ರದರ್ಶಿಸಿದರು. ಆವರಣದಲ್ಲಿ ರಾಷ್ಟ್ರಧ್ವಜಗಳ ಹಾರಾಟ ಮೇಳೈಸಿತ್ತು.

ಸಾಮೂಹಿಕ ಗಾಯನದಲ್ಲಿ ಗೀತೆಗಳು ಮೊಳಗಿದವು. ‘ವಂದೇ ಮಾತರಂ...’, ‘ಬಾರಿಸು ಕನ್ನಡ ಡಿಂಡಿಮವ...’, ‘ತಾಯಿನಾಡು ನಮ್ಮದು...’, ‘ಜಯ ಭಾರತ ಜನನಿಯ ತನುಜಾತೆ...’, ‘ಜನಗಣಮನ ಅಧಿನಾಯಕ...’ ಹಾಡಲಾಯಿತು. .

ADVERTISEMENT

ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್‌.ರೂಪಾ ಸಹಿತ ಹಲವು ಅಧಿಕಾರಿಗಳು, ಸಿಬ್ಬಂದಿ ಶ್ವೇತ ವಸ್ತ್ರ ಧರಿಸಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು,ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಜಿಲ್ಲಾ ಅಧಿಕಾರಿ ಸೋಮಶೇಖರ್‌, ಉಪವಿಭಾಗಾಧಿಕಾರಿ ರಾಜೇಶ್‌, ತಹಶೀಲ್ದಾರ್‌ ವಿನಾಯಕಸಾಗರ್‌, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.