ಬಾಳೆಹೊನ್ನೂರು: ಇಲ್ಲಿನ ರಂಭಾಪುರಿ ಪೀಠದಲ್ಲಿ ನಡೆಯಲಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ನರಸಿಂಹರಾಜಪುರ ತಾಲ್ಲೂಕು ಪತ್ರಕರ್ತರ ವತಿಯಿಂದ ಮಾರ್ಚ್ 11ರಂದು ಆಯೋಜಿಸಿರುವ ಕೃಷಿ ಸಮ್ಮೇಳನದಲ್ಲಿ ರೈತರ ಜಮೀನಿನ ಮಣ್ಣು ಪರೀಕ್ಷೆ, ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ರವಿಚಂದ್ರ ತಿಳಿಸಿದ್ದಾರೆ.
ಕೇಂದ್ರೀಯ ಕಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ರಂಭಾಪುರಿ ಪೀಠದ ಆವರಣದಲ್ಲಿ ತೆರೆಯುವ ಮಳಿಗೆಗಳಲ್ಲಿ ಮಣ್ಣು ಪರೀಕ್ಷೆಯನ್ನು ನಡೆಸಿ ಸ್ಥಳದಲ್ಲಿಯೇ ವರದಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕೃಷಿ ಸಮ್ಮೇಳನಕ್ಕೆ ಬರುವ ಬೆಳೆಗಾರರು, ರೈತರು ಹಾಗೂ ಸಾರ್ವಜನಿಕರ ಆರೋಗ್ಯವನ್ನು ಕೊಪ್ಪದ ಎ.ಎಲ್.ಎನ್.ರಾವ್ ಆಯುರ್ವೇದ ಆಸ್ಪತ್ರೆಯ ವತಿಯಿಂದ ಉಚಿತವಾಗಿ ತಪಾಸಣೆ ನಡೆಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.