ಕಳಸ: ತಾಲ್ಲೂಕಿನಾದ್ಯಂತ ಮಂಗಳವಾರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಉಂಟಾಗಿದೆ. ಮಳೆಯಿಂದಾಗಿ ಕೃಷಿ ಚಟುವಟಿಕೆ ಸ್ತಗಿತಗೊಂಡಿದೆ.
ಕಾಫಿ ತೋಟಗಳಲ್ಲಿ ಮರಗಳು ಬಿದ್ದು ಕಾಫಿ ಗಿಡಗಳಿಗೆ ಹಾನಿ ಆಗಿದೆ. ಅಡಿಕೆ ಮರಗಳೂ ಧರೆಗುರುಳಿವೆ, ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು, ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ.
ಮರಸಣಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರದ ಕಾರ್ಮಿಕ ಕುಟುಂಬದ ಮನೆ ಮೇಲೆ ಮರ ಬಿದ್ದಿದ್ದು, ಪ್ರೇಮ ಅವರಿಗೆ ಗಾಯಗಳಾಗಿದೆ. ಅವರನ್ನು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಪಂಚಾಯಿತಿ ಸದಸ್ಯರಾದ ವಿಶ್ವನಾಥ್, ಗುಲಾಬಿ ಮರ ತೆರವುಗೊಳಿಸಲು ನೆರವಾದರು. ಬಹುತೇಕ ಮನೆ ಜಖಂಗೊಂಡಿದ್ದು, ಮನೆಯಲ್ಲಿದ್ದ ದಿನಬಳಕೆ ವಸ್ತುಗಳು ನಾಶವಾಗಿವೆ. ಪರಿಹಾರ ನೀಡುವಂತೆ ಸಂತ್ರಸ್ತರು ಮನವಿ ಮಡಿದ್ದಾರೆ. ಪೊಲೀಸ್, ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.