ADVERTISEMENT

ಬಿಡುವಿನ ನಡುವೆ ಆಗಾಗ ಮಳೆ

​ಪ್ರಜಾವಾಣಿ ವಾರ್ತೆ
Published 28 ಮೇ 2025, 15:59 IST
Last Updated 28 ಮೇ 2025, 15:59 IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಬಿಡುವಿನ ನಡುವೆ ಬುಧವಾರ ಆಗಾಗ ಮಳೆ ಸುರಿಯಿತು.

ಚಿಕ್ಕಮಗಳೂರು ನಗರದಲ್ಲಿ ಬೆಳಿಗ್ಗೆಯಿಂದ ಆಗಾಗ ಸಾಧಾರಣ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ ಸೇರಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ.

ಬಾಬಾಬುಡನ್‌ಗಿರಿ ರಸ್ತೆಯಲ್ಲಿನ ಕವಿಕಲ್ ಗಂಡಿ ಬಳಿ ಕಳೆದ ವರ್ಷ ರಸ್ತೆ ಕುಸಿತ ಉಂಟಾಗಿ ಸಂಚಾರಕ್ಕೆ ತೊಂದರೆಯಾಗಿತ್ತು. ಅಲ್ಲಿ ಈಗ ತಡೆಗೋಡೆ ನಿರ್ಮಿಸಲಾಗಿದೆ. ಅದರ ಪಕ್ಕದಲ್ಲೇ ಧಾರಾಕಾರವಾಗಿ ನೀರು ನುಗ್ಗುತ್ತಿದ್ದು, ರಸ್ತೆ ಕುಸಿಯುವ ಆತಂಕ ಎದುರಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.