ನರಸಿಂಹರಾಜಪುರ: ತಾಲ್ಲೂಕು ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಭಾರಿ ಮಳೆ ಸುರಿಯಿತು.
ಕಾನೂರು ಗ್ರಾ.ಪಂ. ವ್ಯಾಪ್ತಿಯ ದಾವಣ ಗ್ರಾಮದ ಬಿಳುವ ನಿವಾಸಿ ಲಲಿತಮ್ಮ ಎಂಬುವರ ಮನೆ ಮೇಲೆ ಮರಬಿದ್ದು ಚಾವಣಿಗೆ ಹಾನಿಯಾಗಿದೆ.
ಶನಿವಾರ ಸಂಜೆ 4ರ ವೇಳೆಗೆ ಮಳೆ ಜೋರಾಗಿ ಸುರಿದಿದ್ದು, ನಂತರ ಸ್ವಲ್ಪ ಬಿಡುವು ನೀಡಿದ್ದ ಮಳೆ ಪುನಃ ಸುರಿಯಲು ಆರಂಭಿಸಿತು. ಶುಕ್ರವಾರದಿಂದ ಶನಿವಾರ ಬೆಳಿಗ್ಗೆವರೆಗೆ ಎನ್.ಆರ್.ಪುರದಲ್ಲಿ 1.10 ಸೆಂ.ಮೀ, ಬಾಳೆಹೊನ್ನೂರಿನಲ್ಲಿ 1.44 ಸೆಂ.ಮೀ, ಮೇಗರಮಕ್ಕಿಯಲ್ಲಿ 1.3 ಸೆಂ.ಮೀ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.