ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಬುಧವಾರ ಸಂಜೆಯಿಂದ ಗುರುವಾರ ಮಧ್ಯಾಹ್ನದವರೆಗೂ ವ್ಯಾಪಕವಾಗಿ ಮಳೆ ಸುರಿಯಿತು.
ಗುರುವಾರ ಬೆಳಿಗ್ಗೆಯಿಂದ ಎರಡುಗಂಟೆಗೂ ಅಧಿಕ ಮಳೆ ಸುರಿಯಿತು. ನಂತರ ಬಿಡುವು ನೀಡಿದ್ದ ಮಳೆ ಮಧ್ಯಾಹ್ನದ ವೇಳೆಗೆ ಮತ್ತೆ ಸುರಿಯಿತು. ನಿರಂತರ ಮಳೆಯಿಂದ ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ.
ಬುಧವಾರದಿಂದ ಗುರುವಾರ ಬೆಳಿಗ್ಗೆವರೆಗೆ ನರಸಿಂಹರಾಜಪುರದಲ್ಲಿ 8.1 ಸೆಂ.ಮೀ, ಬಾಳೆಹೊನ್ನೂರಿನಲ್ಲಿ 3.2 ಸೆಂ.ಮೀ ಹಾಗೂ ಮೇಗರಮಕ್ಕಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.