ತರೀಕೆರೆ: ತಾಲ್ಲೂಕಿನ ದುಗ್ಲಾಪುರ, ಭಾವಿಕೆರೆ, ಸೀತಾಪುರ ಕಾವಲಿನಲ್ಲಿ ಮಂಗಳವಾರ ಭಾರಿ ಮಳೆ ಸುರಿಯಿತು.
ಮಳೆಯಿಂದ ಅಡಿಕೆ, ತೆಂಗು, ಭತ್ತದ ಬೆಳೆಗಳಿಗೆ ಅನುಕೂಲವಾಗಿದೆ. ತಾಲ್ಲೂಕಿನ ಕರಕುಚ್ಚಿ ಗ್ರಾಮದಲ್ಲಿ ಸೋಮವಾರ ಸಂಜೆ ಸುರಿದ ಮಳೆ–ಗಾಳಿಗೆ ಅಡಿಕೆ, ತೆಂಗು, ಬಾಳೆ ಬೆಳೆಗಳು ನೆಲಕ್ಕೆ ಉರುಳಿವೆ. ಗುಡುಗು ಸಿಡಿಲಿಂದ ಆರಂಭವಾದ ಮಳೆಯ ಜೊತೆಗೆ ಜೋರಾದ ಗಾಳಿ ಬೀಸಿದ್ದರಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿವೆ. ಗ್ರಾಮದ ಮೋಹನ್ ಕುಮಾರ ಅವರ ತೋಟದಲ್ಲಿ ನೂರಾರು ಅಡಿಕೆ ಮರಗಳು ನೆಲಕ್ಕೆ ಉರುಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.