ADVERTISEMENT

ಭಾರಿ ಮಳೆ: ಚಿಕ್ಕಮಗಳೂರಿನಲ್ಲಿ ಅಂಗನವಾಡಿಗಳಿಗೆ ಮೂರು ದಿನ ರಜೆ

​ಪ್ರಜಾವಾಣಿ ವಾರ್ತೆ
Published 26 ಮೇ 2025, 5:03 IST
Last Updated 26 ಮೇ 2025, 5:03 IST
   

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದು, ಆರು ತಾಲ್ಲೂಕುಗಳ ಅಂಗನವಾಡಿಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ ತಾಲ್ಲೂಕುಗಳ ಅಂಗನವಾಡಿಗಳಿಗೆ ಮೇ 28ರವರೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT