ಬಾಳೆಹೊನ್ನೂರು –ಚಿಕ್ಕಮಗಳೂರು ರಸ್ತೆಯ ದೇವದಾನ ಬಳಿ ಚಲಿಸುತ್ತಿದ್ದ ಕಾರಿನ ಮೇಲೇ ಮರ ಬಿದ್ದು ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ.
ಬಾಳೆಹೊನ್ನೂರು (ಚಿಕ್ಕಮಗಳೂರು): ಪಟ್ಟಣದಿಂದ ಚಿಕ್ಕಮಗಳೂರಿಗೆ ತೆರಳುವ ರಸ್ತೆಯ ದೇವದಾನ ಎಸ್ಟೇಟ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಕಾರಿನಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗ ಜಖಂಗೊಂಡಿದೆ.
ಕಡ್ಲೆಮಕ್ಕಿಯ ಸಂತೋಷ್ ಎಂಬುವವರು ಚಿಕ್ಕಮಗಳೂರಿನಿಂದ ಬಾಳೆಹೊನ್ನೂರು ಕಡೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ. ಮರವು ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದು, ಹಲವು ವಿದ್ಯುತ್ ಕಂಬಗಳು ಮುರಿದಿವೆ. ಮರ ರಸ್ತೆಗೆ ಬಿದ್ದಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡು ಒಂದು ಗಂಟೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಶನಿವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಹಾನಿ ಮುಂದುವರಿದಿದೆ. ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪ ಕೈಮರದ ಬಸ್ ನಿಲ್ದಾಣದ ಬಳಿ ವಿದ್ಯುತ್ ಪರಿವರ್ತಕದ ಮೇಲೆ ಮರ ಬಿದ್ದು ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.