ADVERTISEMENT

ಚಾರ್ಮಾಡಿ: ಭಾರಿ ವಾಹನ ಸಂಚಾರ ನಿರ್ಬಂಧ, ಲಘು ವಾಹನಗಳಿಗೆ ಹಗಲಿನಲ್ಲಿ ಮಾತ್ರ ಅವಕಾಶ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 13:34 IST
Last Updated 23 ಜುಲೈ 2021, 13:34 IST
ಚಾರ್ಮಾಡಿ ಘಾಟಿ ಮಾರ್ಗ
ಚಾರ್ಮಾಡಿ ಘಾಟಿ ಮಾರ್ಗ   

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ (ಎನ್‌.ಎಚ್‌–173) ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಲಘು ವಾಹನಗಳು ಹಗಲಿನಲ್ಲಿ ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್‌, ಲಾರಿ, ಟೆಂಪೊ ಟ್ರಾವಲರ್, ಆಂಬುಲೆನ್ಸ್, ಕಾರು, ಜೀಪು, ವ್ಯಾನ್, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು ಬೆಳಿಗ್ಗೆ 6ರಿಂದ ಸಂಜೆ 7 ಗಂಟೆವರೆಗೆ ಸಂಚರಿಸಲು ಅವಕಾಶ ಇದೆ. ಭಾರಿ ವಾಹನಗಳ ಸಂಚಾರಕ್ಕೆ ಪೂರ್ಣ ನಿರ್ಬಂಧಿಸಲಾಗಿದೆ. ಈ ನಿರ್ಬಂಧವು ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT