ADVERTISEMENT

ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಕೇಸರಿ ಶಾಲು - ಹಿಜಾಬ್ ತಿಕ್ಕಾಟ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 12:17 IST
Last Updated 7 ಫೆಬ್ರುವರಿ 2022, 12:17 IST
ಚಿಕ್ಕಮಗಳೂರಿನ ಐಡಿಎಸ್ ಜಿ ಕಾಲೇಜಿನಲ್ಲಿ ಕೇಸರಿ ಶಾಲು - ಹಿಜಾಬ್ ತಿಕ್ಕಾಟ
ಚಿಕ್ಕಮಗಳೂರಿನ ಐಡಿಎಸ್ ಜಿ ಕಾಲೇಜಿನಲ್ಲಿ ಕೇಸರಿ ಶಾಲು - ಹಿಜಾಬ್ ತಿಕ್ಕಾಟ   

ಚಿಕ್ಕಮಗಳೂರು: ನಗರದ ಐಡಿಎಸ್‌ಜಿಕಾಲೇಜಿನಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತಿಕ್ಕಾಟ ಮುಂದುವರಿದಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್ ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು.

ಕಾಲೇಜಿನಲ್ಲಿ ಹಿಜಾಬ್‌ಗೆ ಅವಕಾಶ ನೀಡಬಾರದು ಎಂದು ಕೆಲ ವಿದ್ಯಾರ್ಥಿಗಳು ಆಗ್ರಹಿಸಿದರು. ಹಿಜಾಬ್ ನಮ್ಮ ಹಕ್ಕು ಎಂದು ತೆಗೆಯಲ್ಲ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಪಟ್ಟು ಹಿಡಿದರು.ಕಾಲೇಜಿನಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಇತ್ತು. ಕಾಲೇಜಿಗೆ ರಜೆ ಘೋಷಿಸಲಾಗಿದೆ.

ADVERTISEMENT

ಐಡಿಎಸ್‌ಜಿ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್‌ಗೆ ಬೆಂಬಲ ವ್ಯಕ್ತಪಡಿಸಿದರು. ಜೈ ಭೀಮ್ ಘೋಷಣೆ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.