ADVERTISEMENT

ಚಿಕ್ಕಮಗಳೂರು: 5 ತಾಲ್ಲೂಕುಗಳ ಶಾಲಾಕಾಲೇಜಿಗೆ ಆ.8ರಂದು ರಜೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 14:12 IST
Last Updated 7 ಆಗಸ್ಟ್ 2019, 14:12 IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕೆಯಾಗಿ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ಎನ್ಆರ್‌ ಪುರ ತಾಲ್ಲೂಕುಗಳ ಶಾಲಾಕಾಲೇಜುಗಳಿಗೆ ಆ.8ರಂದು ರಜೆ ಘೋಷಿಸಲಾಗಿದೆ.

ಮಳೆ ಜೋರಾಗಿದ್ದು ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮುಂಜಾಗ್ರತೆಯಾಗಿ ಐದು ತಾಲ್ಲೂಕುಗಳಲ್ಲಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಆ.8ರಂದು ರಜೆ ನೀಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT