ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸತತ ಮಳೆ ಸುರಿಯುತ್ತಿದ್ದು, ಮಲೆನಾಡಿನ ಆರು ತಾಲ್ಲೂಕುಗಳ ಶಾಲೆ ಮತ್ತು ಅಂಗನವಾಡಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲ್ಲೂಕುಗಳ ಶಿಶುಪಾಲನ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂ.16ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.