ನರಸಿಂಹರಾಜಪುರ: ಭಾರಿ ಗಾಳಿ ಮಳೆಗೆ ಹಲವು ಮನೆಗಳಿಗೆ ಹಾನಿಯಾಗಿದ್ದು, ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಶುಕ್ರವಾರ ಮಳೆ ಹಾನಿ ಸಂಭವಿಸಿದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
‘ದಿನನಿತ್ಯ ದುಡಿದು ಜೀವನ ಸಾಗಿಸುವ ಕುಟುಂಬಗಳಿಗೆ ಹೊಸ ಮನೆಯನ್ನು ನಿರ್ಮಿಸಿಕೊಳ್ಳುವುದು ಕಷ್ಟವಾಗುತ್ತದೆ. ಹಕ್ಕು ಪತ್ರ ಇಲ್ಲದ ಮನೆಗಳಿಗೆ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿಸಿ ಹಕ್ಕು ಪತ್ರ ವಿತರಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದಾ ಮಾತನಾಡಿ,ಪ ‘ಟ್ಟಣದ 1ನೇ ವಾರ್ಡ್‌ನ ಹಿಳುವಳ್ಳಿಯಲ್ಲಿ 58 ಮನೆಗಳಿಗೆ ಹಕ್ಕು ಪತ್ರವಿಲ್ಲ. ಮಳೆಗಾಲದಲ್ಲಿ ಮನೆ ಹಾನಿಯಾದರೆ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ. ಹಕ್ಕು ಪತ್ರವಿಲ್ಲ ಇಲ್ಲದ ಕಾರಣ ಪರಿಹಾರ ವಿತರಿಸಲು ಸಾಧ್ಯವಾಗುವುದಿಲ್ಲ. ಈ ಹಿಂದೆ ಅನೇಕ ಬಾರಿ ಪಟ್ಟಣ ಪಂಚಾಯಿತಿಯಿಂದ ಈ ಮನೆಗಳಿಗೆ ಹಕ್ಕು ಪತ್ರ ನೀಡುವಂತೆ ಅಕ್ರಮ ಸಕ್ರಮದಡಿ ಜಿಲ್ಲಾಧಿಕಾರಿ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಸಕರ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರು ನಿಯೋಗ ತೆರಳಿ ಹಕ್ಕು ಪತ್ರ ವಿತರಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.
ಪಟ್ಟಣದ 1ನೇ ವಾರ್ಡಿನ ನಾಗರತ್ನ ಎಂಬುವರ ಮನೆ ಧರೆಗುರುಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.