ADVERTISEMENT

ಸಂಘಟನಾತ್ಮಕ ವಿಚಾರ ಚರ್ಚೆಗೆ ಬಂದಿದ್ದೇನೆ: ಕಟೀಲ್

​ಪ್ರಜಾವಾಣಿ ವಾರ್ತೆ
Published 28 ಮೇ 2021, 12:01 IST
Last Updated 28 ಮೇ 2021, 12:01 IST

ಚಿಕ್ಕಮಗಳೂರು: ‘ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಎರಡನೇ ಅವಧಿಯ ಎರಡನೇ ವರ್ಷವನ್ನು ಇದೇ 30ರಂದು ಪೂರೈಸಲಿರುವ ಅಂಗವಾಗಿ ಸೇವಾಹಿ ಸಂಘಟನೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ತಿಳಿಸಿದ್ದಾರೆ. ಸಂಘಟನಾತ್ಮಕ ವಿಚಾರಗಳ ಕುರಿತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರೊಂದಿಗೆ ಚರ್ಚಿಸಲು ಇಲ್ಲಿಗೆ ಬಂದಿದ್ದೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲೂ ಒಂದಷ್ಟು ಯೋಜನೆ ಹಾಕಿಕೊಂಡಿದ್ದೇವೆ. ಈಗ ಲಾಕ್‌ಡೌನ್‌ ಇದೆ. ಗ್ರಾಮಗಳಲ್ಲಿ‌ ಕಾರ್ಯಕ್ರಮ ಮಾಡಬೇಕಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರ ನಡೆದ ಘಟನೆಗಳ ಬಗ್ಗೆ ಸಂವಾದಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.

‘ಕೋವಿಡ್‌ ನಿರ್ವಹಣೆ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಪಕ್ಷದ ಜನಪ್ರತಿನಿಧಿಗಳು, ಕಾರ್ಯಕರ್ತರಿಗೆ ತಿಳಿಸಿದ್ದೇವೆ. ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿಕೆಗೆ ಸಂಬಂಧಿಸಿದಂತೆ ವಿವರಣೆ ಪಡೆಯುತ್ತೇನೆ’ ಎಂದು ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.