ADVERTISEMENT

ಕೌಶಲ ಇದ್ದರೆ ಬೇಡಿಕೆ: ನಿರಂಜನ ಕುಮಾರ್ 

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2024, 16:32 IST
Last Updated 12 ಡಿಸೆಂಬರ್ 2024, 16:32 IST
ಶೃಂಗೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನನ್ನ ವೃತ್ತಿ ನನ್ನ ಆಯ್ಕೆ ಪುಸ್ತಕ ವಿತರಿಸಲಾಯಿತು
ಶೃಂಗೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನನ್ನ ವೃತ್ತಿ ನನ್ನ ಆಯ್ಕೆ ಪುಸ್ತಕ ವಿತರಿಸಲಾಯಿತು   

ಶೃಂಗೇರಿ: ‘ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಂಡರೂ ಪ್ರಾಮಾಣಿಕತೆ, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ದೊರಕುತ್ತದೆ’ ಎಂದು ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿರಂಜನ ಕುಮಾರ್ ಹೇಳಿದರು.

ಶೃಂಗೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ರಾಷ್ಟ್ರೀಯ ಕೌಶಲ ಅಭಿವೃದ್ಧಿ ಯೋಜನೆಯಡಿ ವೃತ್ತಿ ಆಯ್ಕೆ ಬಗ್ಗೆ ‘ನನ್ನ ವೃತ್ತಿ ನನ್ನ ಆಯ್ಕೆ’ ಪುಸ್ತಕ ವಿತರಿಸಿ ಅವರು ಮಾತನಾಡಿದರು.

`ಕೌಶಲ ಇದ್ದವರಿಗೆ ಬೇಡಿಕೆ ಇದ್ದೇ  ಇರುತ್ತದೆ. ಎಲ್ಲರಿಗೂ ಸರ್ಕಾರಿ ಉದ್ಯೋಗ ಲಭಿಸುವುದಿಲ್ಲ. ಸ್ವಯಂ ಉದ್ಯೋಗದ ಮೂಲಕ ಭವಿಷ್ಯ– ಬದುಕು  ರೂಪಿಸಿಕೊಳ್ಳಬಹುದಾಗಿದೆ' ಎಂದರು.

ADVERTISEMENT

ಉಪ ಪ್ರಾಂಶುಪಾಲ ಶಶಿಧರ್ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಆನಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಆಟೊಮೊಬೈಲ್ ಶಿಕ್ಷಕ ವಿನೋದಕುಮಾರ್, ಸಮಿತಿಯ ಸದಸ್ಯ ರಾಜೇಶ್, ಉಷಾ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.