ರಂಭಾಪುರಿ ಪೀಠ(ಬಾಳೆಹೊನ್ನೂರು) ; ದೇಶಾದ್ಯಂತ ಇಂದು 79ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಜರುಗುತ್ತಿರುವುದು ಹೆಮ್ಮೆಯ ಸಂಗತಿ. ಬೆಳೆಯುವ ಯುವ ಜನಾಂಗದಲ್ಲಿ ರಾಷ್ರಾಭಿಮಾನ ಬೆಳೆದು ಬರುವ ಅವಶ್ಯಕತೆ ಇದೆಯೆಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.
ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನದ ಜಗದ್ಗುರು ರುದ್ರಮುನೀಶ್ವರ ವಸತಿ ಪ್ರೌಢ ಶಾಲೆ ಹಾಗೂ ವೀರಭದ್ರೇಶ್ವರ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಆಶೀರ್ವಚನ ನೀಡಿದ ಅವರು.
ಹಲವಾರು ದೇಶ ಭಕ್ತರ ಪರಿಶ್ರಮದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆಯಿತು. ಅವರ ತ್ಯಾಗ ಹೋರಾಟ ಮತ್ತು ಬಲಿದಾನ ಮರೆಯಲಾಗದು. ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿ ಮಹಾತ್ಮಾ ಗಾಂಧೀಜಿ, ವಲ್ಲಭಭಾಯಿ ಪಟೇಲ, ಸುಭಾಷಚಂದ್ರ ಬೋಸ್, ಜವಾಹರಲಾಲ್ ನೆಹರೂ, ಬಾಲಗಂಗಾಧರ ತಿಲಕ, ಲಾಲಾ ಲಜಪತರಾಯ, ಸರೋಜಿನಿ ನಾಯ್ಡು ಇನ್ನೂ ಮೊದಲಾದ ನಾಯಕರ ನಿರಂತರ ಹೋರಾಟದಿಂದ ಭಾರತ ಸ್ವಾತಂತ್ರ್ಯ ಪಡೆಯಲು ಸಾಧ್ಯವಾಯಿತು.
ಸ್ವಾತಂತ್ರ್ಯಾನಂತರ ಭಾರತ ಅಭಿವೃದ್ಧಿಯತ್ತ ಸಾಗುತ್ತಿದೆ. ಸಶಕ್ತ ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಅನೇಕ ರಾಜಕೀಯ ಧುರೀಣರು ಶ್ರಮಿಸಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿ, ನೀರಾವರಿ, ಉದ್ಯೋಗ, ಬಡತನ ನಿವಾರಣೆ, ಅಸ್ಪ್ರಶ್ಯೋದ್ದಾರ ಮಾಡುವಲ್ಲಿ ಶÀ್ರಮಿಸುತ್ತ ಬಂದಿದೆ. ಭವಿಷ್ಯತ್ತಿನ ದಿನಗಳಲ್ಲಿ ಪ್ರತಿಯೊಬ್ಬರಲ್ಲಿ ದೇಶಾಭಿಮಾನ ರಾಷ್ಟ್ರ ಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಾಗಿದೆ. ವಿವಿಧತೆಯಲ್ಲಿ ಏಕತೆಯಿಂದ ಬಾಳುವ ಮನೋಭಾವ ಎಲ್ಲರಲ್ಲೂ ಬೆಳೆದು ಬರಬೇಕೆಂದು ಆಶಿಸಿದರು.
ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.ಶಾಲಾ ಪ್ರಭಾರಿ ಮುಖ್ಯೋಪಾಧ್ಯಾಯ ವೀರೇಶ ಕುಲಕರ್ಣಿ, ಗ್ರಾಮ ಪಂಚಾಯತಿ ಸದಸ್ಯ ಕುಮಾರ, ಮಹೇಶ ಆಚಾರಿ, ನೆಗಳೂರು ಮತ್ತು ಹುಡುಗಿ ಸ್ವಾಮೀಜಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.