
ಚಿಕ್ಕಮಗಳೂರು: 2025-26ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷರ ಕಬಡ್ಡಿ ಟೂರ್ನಿ ಫೆ. 13 ಮತ್ತು 14ರಂದು ನಗರದ ಐ.ಡಿ.ಎಸ್.ಜಿ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ತಸನಿಮ್ ಕೌಸರ್ ಮನಿಯಾರ್ ತಿಳಿಸಿದರು.
ಕಾಲೇಜು ಶಿಕ್ಷಣ ಇಲಾಖೆ, ಕುವೆಂಪು ವಿಶ್ವವಿದ್ಯಾಲಯ, ಐ.ಡಿ.ಎಸ್.ಜಿ ಸರ್ಕಾರಿ ಕಾಲೇಜಿನ ಆಶ್ರಯದಲ್ಲಿ ಈ ಟೂರ್ನಿ ಆಯೋಜಿಸಲಾಗಿದ್ದು, ಶಾಸಕ ಎಚ್.ಡಿ ತಮ್ಮಯ್ಯ ಉದ್ಘಾಟಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಹೇಳಿದರು.
ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಸುಮಾರು 35 ಪದವಿ ಕಾಲೇಜುಗಳ ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.
ಫೆ. 14ರಂದು ಮಧ್ಯಾಹ್ನ 3.30ಕ್ಕೆ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ದೈಹಿಕ ಶಿಕ್ಷಣ ನಿರ್ದೇಶಕ ಎನ್.ಡಿ. ವಿರೂಪಾಕ್ಷ ಬಹುಮಾನ ವಿತರಣೆ ಮಾಡುವರು. ಪ್ರಾಧ್ಯಾಪಕ ಎಸ್.ವಿ. ನಾಗರಾಜ, ಲಕ್ಷ್ಮಿಕಾಂತ್ ಪಾಲ್ಗೊಳ್ಳಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೆ.ಸಿ. ಕುಮಾರಸ್ವಾಮಿ, ಪ್ರಾಧ್ಯಾಪಕ ಲಕ್ಷ್ಮಿಕಾಂತ್, ಮಹೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.