ADVERTISEMENT

ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು

ಮೂಡಿಗೆರೆ: ಬಾಲಕಾರ್ಮಿಕ ವಿರೋಧಿ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 15:45 IST
Last Updated 13 ಜೂನ್ 2025, 15:45 IST
ಮೂಡಿಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಜೆಎಂಎಫ್‍ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎ. ವಿಶ್ವನಾಥ್ ಮಾತನಾಡಿದರು
ಮೂಡಿಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಜೆಎಂಎಫ್‍ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎ. ವಿಶ್ವನಾಥ್ ಮಾತನಾಡಿದರು   

ಮೂಡಿಗೆರೆ: ‘ಪ್ರಾಥಮಿಕ ಶಿಕ್ಷಣವು ಮಗುವಿನ ಮೂಲಭೂತ ಹಕ್ಕಾಗಿದ್ದು, ಸಮಾಜದಲ್ಲಿನ ಯಾವುದೇ ಮಗುವು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ’ ಎಂದು ಜೆಎಂಏಪ್‌ ನ್ಯಾಯಾಲಯದ ಪ್ರಧಾನ ಸಿವಿಲ್‌ ನ್ಯಾಯಾಧೀಶ ಎ. ವಿಶ್ವನಾಥ್‌ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಮಾಜ ಉತ್ತಮ ಸ್ಥಿತಿಯಲ್ಲಿ ಸಾಗಬೇಕೆಂದರೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವ ಮೂಲಕ ಪ್ರಜ್ಞಾವಂತರಾಗಬೇಕು. ದೇಶದಲ್ಲಿ ಕಾನೂನು ಬಿಗಿಯಾಗಿದ್ದರೂ ಕೂಡ ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ ನಡೆಯುತ್ತಿರುವುದು ದುರಂತ. ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಸಿಗುವಂತಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದು ಹಾಗೂ ಬಾಲ ಕಾರ್ಮಿಕರು ಕಂಡು ಬಂದರೆ ಕೂಡಲೇ ಶಿಕ್ಷಕರಿಗೆ ಅಥವಾ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದ ಅವರು, ಬಾಲ ಕಾರ್ಮಿಕ ತಡೆ ಬಗ್ಗೆ ವಿದ್ಯಾರ್ಥಿಗಳಿಗೆ ಬದ್ಧತಾ ಪ್ರಮಾಣವಚನ ಬೋಧಿಸಿದರು.

ADVERTISEMENT

ಎಸ್‍ಡಿಎಂಸಿ ಅಧ್ಯಕ್ಷ ಎಂ.ಎಸ್.ಅನಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಲಸ ಮಾಡುವ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ಮಕ್ಕಳು ದೈಹಿಕ, ಬೌದ್ಧಿಕ ಹಾಗೂ ಮಾನಸಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುವುದಿಲ್ಲ. ಅಲ್ಲದೇ ತಮ್ಮ ಸಮುದಾಯಕ್ಕೆ ಕೊಡುಗೆ ನೀಡುವ ಸಾಮರ್ಥ್ಯದಿಂದ ದೂರ ಸರಿಯುತ್ತಾರೆ. ಇಂತಹ ಅನಿಷ್ಟ ಬಾಲ ಕಾರ್ಮಿಕ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಎ. ಮೀನಾಕ್ಷಿ, ವಕೀಲ ರಿಜ್ವಾನ್ ಅಲಿ ಮಾತನಾಡಿದರು. ವಕೀಲರ ಸಂಘದ ಸಹ ಕಾರ್ಯದರ್ಶಿ ಕೆ.ಆರ್. ಹರ್ಷಾಂತ್, ಸಹಾಯಕ ಸರ್ಕಾರಿ ಅಭಿಯೋಜಕಿ ಟಿ.ರೂಪಾ, ಕಾರ್ಮಿಕ ಇಲಾಖೆ ನಿರೀಕ್ಷಕ ಎಚ್.ಕೆ. ಪ್ರಭಾಕರ್, ಶಾಲೆ ಪ್ರಾಂಶುಪಾಲ ಎಂ. ಜಗದೀಶ್‍ನಾಯಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.