ಚಿಕ್ಕಮಗಳೂರು: ‘ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತಾಡಲು ಎಲ್.ಆರ್.ಶಿವರಾಮೇಗೌಡ ಅವರೇನು ಎಐಸಿಸಿ ಅಧ್ಯಕ್ಷರಾ ಅಥವಾ ಪ್ರಧಾನ ಕಾರ್ಯದರ್ಶಿಯೇ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಶ್ನಿಸಿದರು.
‘ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಇಲ್ಲ ಎಂದು ಹೇಳುವುದಿಲ್ಲ. ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ಖಾಲಿಯಾದ ಬಳಿಕ ಈ ಬಗ್ಗೆ ಚರ್ಚೆ ಮಾಡೋಣ. ಅದಕ್ಕಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷವಿದೆ ಮತ್ತು ಹೈಕಮಾಂಡ್ ಇದೆ’ ಎಂದು ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯಿಸಿದರು.
ಸಿಎಲ್‌ಪಿ ಸಭೆಯಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ. ಇಂತಹ ವಿಷಯದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಶಿವರಾಮೇಗೌಡ ಅವರ ಹೇಳಿಕೆಗೆ ಪ್ರಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.