ADVERTISEMENT

ಕಾಂಗ್ರೆಸ್‌ನ ಎ.ವಿ.ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2022, 5:48 IST
Last Updated 17 ನವೆಂಬರ್ 2022, 5:48 IST
   

ಚಿಕ್ಕಮಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಅವರ ನಿವಾಸಕ್ಕೆ ಬೆಳ್ಳಂಬೆಳಿಗ್ಗೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಅಧಿಕಾರಿಗಳು ಕಾಗದಪತ್ರ, ಇತ್ಯಾದಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಗಾಯತ್ರಿ ಕುಟಂಬದವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೊಲೀಸರು ಜೊತೆಗೆ ಇದ್ದಾರೆ.

ಎ.ವಿ.ಗಾಯತ್ರಿಶಾಂತೇಗೌಡ ಅವರ ಮನೆಗೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಖಂಡಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ADVERTISEMENT

ಪ್ರತಿಭಟನಾಕಾರರು ಶಾಸಕ ಸಿ.ಟಿ.ರವಿ, ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸರ್ಕಾರವಿ ಐ.ಟಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಸಿ.ಟಿ.ರವಿ ಅವರ ಮನೆಗೂ ಐಟಿ ದಾಳಿ ನಡೆಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡರಾದ ಎಂ.ಎಲ್.ಮೂರ್ತಿ, ಕೆ.ಮಹಮ್ಮದ್, ರೇಖಾಹುಲಿಯಪ್ಪಗೌಡ, ಹಿರೇಮಗಳೂರು ಪುಟ್ಟಸ್ವಾಮು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.