ADVERTISEMENT

ಕೊಪ್ಪ: ಜೆಡಿಎಸ್‌ ಮುಖಂಡ ಎಚ್.ಜಿ.ವೆಂಕಟೇಶ್ ಮನೆಯಲ್ಲಿ ಕಳವು

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 7:36 IST
Last Updated 22 ಆಗಸ್ಟ್ 2025, 7:36 IST
ಕಳ್ಳತನ (ಪ್ರಾತಿನಿಧಿಕ ಚಿತ್ರ)
ಕಳ್ಳತನ (ಪ್ರಾತಿನಿಧಿಕ ಚಿತ್ರ)   

ಕೊಪ್ಪ: ರಾಜ್ಯ ಜೆಡಿಎಸ್ ಮುಖಂಡ ಎಚ್.ಜಿ.ವೆಂಕಟೇಶ್ ಅವರ ಹರಂದೂರಿನ ಮನೆಯಲ್ಲಿ ಬುಧವಾರ ರಾತ್ರಿ ನಗದು, ಚಿನ್ನಾಭರಣ ಕಳವು ನಡೆದಿದೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

ಅನ್ಯ ಕಾರ್ಯ ನಿಮಿತ್ತ ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ವೆಂಕಟೇಶ್ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಬೆಂಗಳೂರಿನವನು ಎಂದು ಹೇಳಲಾಗಿರುವ ಮೂಲತಃ ನೇಪಾಳದ ಕಾರ್ಮಿಕನಿಂದ ಕಳವು ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಎಷ್ಟು ಮೊತ್ತದ ಚಿನ್ನಾಭರಣ, ಹಣ ಕಳವು ಆಗಿದೆ ಎಂದು ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ವೆಂಕಟೇಶ್ ಅವರ ಎಸ್ಟೇಟ್ ವ್ಯವಸ್ಥಾಪಕ ಶಿವಮೂರ್ತಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.