ADVERTISEMENT

ಕೊಪ್ಪ: ರಸ್ತೆ ಗುಂಡಿ ಮುಚ್ಚಿ ಜೆಡಿಎಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 7:28 IST
Last Updated 29 ಅಕ್ಟೋಬರ್ 2025, 7:28 IST
   

ಕೊಪ್ಪ(ಚಿಕ್ಕಮಗಳೂರು): ಪಟ್ಟಣದಲ್ಲಿನ ರಸ್ತೆಗಳ ಗುಂಡಿ‌ ಮುಚ್ಚದ ಕ್ರಮ ಖಂಡಿಸಿ ಜೆಡಿಎಸ್ ಕಾರ್ಯಕರ್ತರೇ ಗುಂಡಿ ಮುಚ್ಚುವ ಮೂಲಕ ಬುಧವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಮುಚ್ಚುವ ಕಾಮಗಾರಿ ನಡೆಸದೆ ಸರ್ಕಾರ ಕೈಕಟ್ಟಿ ಕುಳಿತಿದೆ‌. ಗುಂಡಿಗಳಲ್ಲಿ ವಾಹನ ಚಾಲನೆ ಮಾಡಲು ಸಾಧ್ಯವಾಗದೆ ಜನ ಪರದಾಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು. ಗುಂಡಿಗಳಿಗೆ ಸಿಮೆಂಟ್ ಕಾಂಕ್ರೀಟ್ ಹಾಕಿ ಸಮಗೊಳಿಸಿದರು.

ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ, ಕ್ಷೇತ್ರ ಘಟಕದ ಅಧ್ಯಕ್ಷ ದಿವಾಕರ್ ಭಟ್, ತಾಲ್ಲೂಕು ಘಟಕದ ಅಧ್ಯಕ್ಷ ಕಗ್ಗಾ ರಾಮಸ್ವಾಮಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.