ADVERTISEMENT

ಕಡೂರು: ಶಿಕ್ಷಣ ಸಚಿವರ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 16:25 IST
Last Updated 1 ಜುಲೈ 2022, 16:25 IST
ಶಿಕ್ಷಣ ಸಚಿವ ನಾಗೇಶ್ ಅವರ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿದರು.
ಶಿಕ್ಷಣ ಸಚಿವ ನಾಗೇಶ್ ಅವರ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿದರು.   

ಕಡೂರು: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿದ ಅಮಾಯಕ ವಿದ್ಯಾರ್ಥಿಗಳನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಜನ್ಮದಿನವನ್ನು ಕತ್ತೆಗೆ ಕೇಕ್ ತಿನ್ನಿಸುವುದರ ಮೂಲಕ ಆಚರಿಸಿ, ಪ್ರತಿಭಟನೆ ವ್ಯಕ್ತಪಡಿಸಿದರು.

ಪಟ್ಟಣದ ಅಂಬೇಡ್ಕರ್ ಪ್ರತಿಮೆಯ ಮುಂದೆ ಕತ್ತೆಯ ಮೇಲೆ ಸಚಿವರ ಮುಖವಾಡ ಹಾಕಿದ ವ್ಯಕ್ತಿಯನ್ನು ಕೂರಿಸಿ, ಕೇಕ್ ಕತ್ತರಿಸಿ ಸಚಿವರ ವಿರುದ್ಧ ಘೋಷಣೆ ಕೂಗಿದರು.

ADVERTISEMENT

ಎನ್ಎಸ್‌ಯುಐ ಜಿಲ್ಲಾ ಅಧ್ಯಕ್ಷ ಶ್ರೀಕಾಂತ್, ತಾಲ್ಲೂಕು ಅಧ್ಯಕ್ಷ ತರುಣ್, ಯುವ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ರೇವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಯ್ ಕೆ.ಎಸ್, ತಾಲ್ಲೂಕು ಕಾರ್ಯದರ್ಶಿ ಯಶವಂತ್ ಅಸ್ಥಿಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.