
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಕಡೂರು: ಚಿಕ್ಕಂಗಳ ಸಮೀಪದ ಅಂದೇನಹಳ್ಳಿ ಗ್ರಾಮದ ಉಮೇಶಯ್ಯ ಎಂಬುವರ ಪುತ್ರ ಚಿನ್ಮಯ್ (23) ಅವರ ಮೃತದೇಹ ಎಮ್ಮೆದೊಡ್ಡಿ ಸಮೀಪದ ಮದಗದ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.
ಮೃತ ಚಿನ್ಮಯ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು, ಕಳೆದ ವಾರ ಊರಿಗೆ ಬಂದಿದ್ದರು. ಕಳೆದ (ಜ.3) ಶನಿವಾರ ಮನೆಯಿಂದ ಅವರು ನಾಪತ್ತೆಯಾಗಿದ್ದರು. ಕುಟುಂಬದವರು ಸುತ್ತಮುತ್ತಲ ಗ್ರಾಮಗಳಲ್ಲಿ ಮತ್ತು ಸಂಬಂಧಿಕರಲ್ಲಿ ಪರಿಶೀಲನೆ ನಡೆಸಿ ಹುಡುಕಾಟ ನಡೆಸಿದ್ದರು. ಬುಧವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಮತ ಯುವಕನು ಮಾನಸಿಕ ಅಸ್ವಸ್ಥನಾಗಿದ್ದ ಎಂದು ಕುಟುಂಬ ಮೂಲಗಳು ತಿಳಿಸಿವೆ. ಯುವಕನ ತಂದೆ ನೀಡಿದ ದೂರಿನ ಅನ್ವಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.