ADVERTISEMENT

ಕಡೂರು: ಬಾಲಕಿ ಮೇಲೆ ಅತ್ಯಾಚಾರ; ಇಬ್ಬರಿಗೆ 10 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 6:19 IST
Last Updated 24 ಆಗಸ್ಟ್ 2025, 6:19 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಪ್ರಜಾವಾಣಿ ವಾರ್ತೆ

ಕಡೂರು: ಬಾಲಕಿಗೆ ಪುಸಲಾಯಿಸಿ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದ ಇಬ್ಬರು ಅಪರಾಧಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

ADVERTISEMENT

ಕಡೂರು ತಾಲ್ಲೂಕಿನ ಚಿಕ್ಕಂಗಳದ ಕಿರಣ್‌ ನಾಯಕ, ಅಭಿಷೇಕ್‌ ನಾಯ್ಕ ಶಿಕ್ಷೆಗೆ ಒಳಗಾದವರು. ಮೊದಲ ಆರೋಪಿ ಕಿರಣ್‌ನಾಯಕಗೆ ₹41ಸಾವಿರ ದಂಡ, ಎರಡನೇ ಆರೋಪಿ ಅಭಿಷೇಕ್‌ ನಾಯ್ಕಗೆ ₹11 ಸಾವಿರ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹1 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದೆ.

2023ರ ನವೆಂಬರ್‌ನಲ್ಲಿ ಪ್ರಕರಣ ನಡೆದಿದ್ದು, ಒಂದನೇ ಆರೋಪಿ ಕಿರಣ್ ನಾಯಕ, ಎರಡನೇ ಆರೋಪಿ ಅಭಿಷೇಕ್ ನಾಯ್ಕನ ಸಹಾಯದಿಂದ ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಈ ಕುರಿತು ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ವೃತ್ತ ನಿರೀಕ್ಷಕ ಕೆ.ಆರ್.ಶಿವಕುಮಾರ್ ಪ್ರಕರಣದ ತನಿಖೆಯನ್ನು ನಡೆಸಿ, ಪ್ರಭಾರ ವೃತ್ತ ನಿರೀಕ್ಷಕ ಶ್ರೀಕಾಂತ್ ಎನ್‌.ಎಸ್‌.ಆರೋಪಿತರ ವಿರುದ್ಧ ಚಿಕ್ಕಮಗಳೂರಿನ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ವಿಶೇಷ ಸರ್ಕಾರಿ ಅಭಿಯೋಜಕ ಭರತ್ ಕುಮಾರ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.