ADVERTISEMENT

ಕಳಸ: ಸಂಜೀವಿನಿ ಒಕ್ಕೂಟಕ್ಕೆ ₹ 99 ಲಕ್ಷ ಅನುದಾನ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 6:09 IST
Last Updated 2 ಅಕ್ಟೋಬರ್ 2022, 6:09 IST
ಕಳಸದಲ್ಲಿ ಶನಿವಾರ ನಡೆದ ಮಹಿಳಾ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟದ ಸಭೆಯಲ್ಲಿ ಶಾಸಕ ಕುಮಾರಸ್ವಾಮಿ ಮತ್ತು ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.
ಕಳಸದಲ್ಲಿ ಶನಿವಾರ ನಡೆದ ಮಹಿಳಾ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟದ ಸಭೆಯಲ್ಲಿ ಶಾಸಕ ಕುಮಾರಸ್ವಾಮಿ ಮತ್ತು ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.   

ಕಳಸ: ತಾಲ್ಲೂಕಿನ 6 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಕ್ಕೆ ಒಟ್ಟು ₹ 99 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ನಡೆದ ಸಂಜೀವಿನಿ ಒಕ್ಕೂಟದ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಳಸ ಪಂಚಾಯಿತಿ ವ್ಯಾಪ್ತಿಯ ಸಂಘಗಳಿಗೆ ₹ 28.5 ಲಕ್ಷ, ಹೊರನಾಡು ಗ್ರಾಮಕ್ಕೆ ₹ 7.5 ಲಕ್ಷ, ತೋಟದೂರು ಗ್ರಾಮಕ್ಕೆ ₹ 21 ಲಕ್ಷ, ಮರಸಣಿಗೆ ಗ್ರಾಮಕ್ಕೆ ₹ 9 ಲಕ್ಷ, ಇಡಕಿಣಿ ಗ್ರಾಮಕ್ಕೆ ₹ 12 ಲಕ್ಷ ಮತ್ತು ಸಂಸೆ ಗ್ರಾಮದ ಸಂಘಗಳಿಗೆ ₹ 21 ಲಕ್ಷ ಅನುದಾನ ಬಿಡುಗಡೆಯಾಗಿದೆ. ಈ ಅನುದಾನವನ್ನು ಸದ್ಯದಲ್ಲೇ ವಿತರಣೆ ಮಾಡಲಾಗುತ್ತದೆ ಎಂದರು.

ಕಳಸ ಪಂಚಾಯಿತಿ ಅಧ್ಯಕ್ಷೆ ಸುಜಯಾ, ಸದಸ್ಯರಾದ ರಂಗನಾಥ್, ಕಾರ್ತಿಕ್ ಶಾಸ್ತ್ರಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪ್ರಕಾಶ್, ಒಕ್ಕೂಟದ ಅಧ್ಯಕ್ಷೆ ಸೌಮ್ಯಾ, ಮಾಲಿನಿ, ತಾಲ್ಲೂಕು ವ್ಯವಸ್ಥಾಪಕಿ ಶಾಲಿನಿ, ರತಿ, ಜಯಂತಿ, ಜ್ಯೋತಿ, ವಿಜಯಲಕ್ಷ್ಮಿ, ಪವಿತ್ರಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.