ADVERTISEMENT

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಸಿನ ಮತದಾನ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 6:07 IST
Last Updated 21 ನವೆಂಬರ್ 2021, 6:07 IST
ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.   

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಶುರುವಾಗಿದೆ.

ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೂರಿ ಶ್ರೀನಿವಾಸ್, ಶಿವಾನಂದ ಸ್ವಾಮಿ, ಸುಂದರ ಬಂಗೇರಾ, ವಿಜಯಕುಮಾರ್, ಎಚ್.ಡಿ. ರೇವಣ್ಣ ಕಣದಲ್ಲಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 1837 ಮತದಾರರು ಇದ್ದಾರೆ. 16 ಕಡೆ ಮತಗಟ್ಟೆ ಸ್ಥಾಪಿಸಲಾಗಿದೆ.

ದಾವಣಗೆರೆ: ಕಸಾಪ ಚುನಾವಣೆ
ದಾವಣಗೆರೆ:
ಕನ್ನಡ ಸಾಹಿತ್ಯ ಪರಿಷತ್ತಿಗೆ ಭಾನುವಾರ ಮತದಾನ ಆರಂಭಗೊಂಡಿದ್ದು, ನಿಧಾನಗತಿಯಲ್ಲಿ ಸಾಗುತ್ತಿದೆ.

ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಬಿ. ವಾಮದೇವಪ್ಪ ಮತ್ತು ಶಿವಕುಮಾರಸ್ವಾಮಿ ಕುರ್ಕಿ ಕಣದಲ್ಲಿದ್ದಾರೆ.

ADVERTISEMENT

ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಸಹಿತ ಹಲವು ಗಣ್ಯರು ಮತ ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.