ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನ: ಅಕ್ಷರ ಜಾತ್ರೆಗೆ ಬುಕ್ಕಾಂಬುಧಿ ಸಜ್ಜು

ಅಜ್ಜಂಪುರ ತಾಲ್ಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 1:31 IST
Last Updated 25 ಜನವರಿ 2021, 1:31 IST
ಅಜ್ಜಂಪುರ ತಾಲ್ಲೂಕಿನ 2ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬುಕ್ಕಾಂಬುಧಿ ಗ್ರಾಮ ಸಜ್ಜುಗೊಂಡಿದೆ.
ಅಜ್ಜಂಪುರ ತಾಲ್ಲೂಕಿನ 2ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬುಕ್ಕಾಂಬುಧಿ ಗ್ರಾಮ ಸಜ್ಜುಗೊಂಡಿದೆ.   

ಅಜ್ಜಂಪುರ: ತಾಲ್ಲೂಕಿನ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬುಕ್ಕಾಂಬುಧಿ ಸಂಪೂರ್ಣ ಸಜ್ಜುಗೊಂಡಿದೆ.

ಸಾಹಿತ್ಯಾಸಕ್ತರನ್ನು ಪಂಪಾ ವಿರೂಪಾಕ್ಷೇಶ್ವರ ಮಹಾದ್ವಾರ ಸ್ವಾಗತಿ ಸುತ್ತಿದೆ. ವೇದಿಕೆ ಕಾರ್ಯಕ್ರಮಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಬುಕ್ಕರಾಯ ರಂಗಮಂದಿರವನ್ನು ವ್ಯವಸ್ಥೆಗೊಳಿಸಲಾಗಿದೆ.

ಗ್ರಾಮದ ಮುಖ್ಯರಸ್ತೆ, ವೃತ್ತದಲ್ಲಿ ಸಾಹಿತ್ಯ ಸಮ್ಮೇಳನದ ಬ್ಯಾನರ್‌ಗಳು ರಾರಾಜಿಸುತ್ತಿವೆ. ತಳಿರು- ತೋರಣ ಗಳಿಂದ ಸಿಂಗರಿಸಲಾಗಿದೆ. ಬಾಳೆಕಂದು ಕಟ್ಟಲಾಗಿದೆ. ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಸಾಹಿತ್ಯಾ ಸಕ್ತರು, ಕನ್ನಡಾಭಿಮಾನಿಗಳನ್ನು ಕೈಬೀಸಿ ಕರೆಯುತ್ತಿದೆ.

ADVERTISEMENT

ಧ್ವಜಾರೋಹಣ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಇದೇ 25ರಂದು ಬೆಳಿಗ್ಗೆ 8ಕ್ಕೆ ಉಪ ವಿಭಾಗಾಧಿಕಾರಿ ರೇಣುಕಾ ಪ್ರಸಾದ್, ತಹಶೀಲ್ದಾರ್ ತಿಮ್ಮಣ್ಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹ ಣಾಧಿಕಾರಿ ರಾಮ್ ಕುಮಾರ್ ಅವರಿಂದ ಧ್ವಜಾರೋಹಣ ನಡೆಯಲಿದೆ.

ಬೆಳಿಗ್ಗೆ 9ಕ್ಕೆ ನಡೆಯುವ ಸಮ್ಮೇಳನಾ ಧ್ಯಕ್ಷರ ಮೆರವಣಿಗೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಚಿತ್ರಾ ಬಾಬು, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಶಶಿಕಲಾ ಅವಿನಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ್ ಮತ್ತಿತರರು ಭಾಗವಹಿಸಲಿದ್ದಾರೆ.

ಬೆಳಿಗ್ಗೆ 11ಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಮ್ಮೇಳನಕ್ಕೆ ಚಾಲನೆ ನೀಡುವರು. ಸಾಹಿತಿ ದ.ರಾಜಣ್ಣ ಸಮ್ಮೇಳನಾಧ್ಯಕ್ಷತೆ ವಹಿಸುವರು. ಶಾಸಕ ಡಿ.ಎಸ್.ಸುರೇಶ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಡಿ.ಪಿ.ರಾಜಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಕುಂದೂರು ಅಶೋಕ್ ಪಾಲ್ಗೊಳ್ಳುವರು.

ಮಧ್ಯಾಹ್ನ 12ಕ್ಕೆ ನಡೆಯುವ ‘ಸಾಹಿತ್ಯ ಮತ್ತು ಬದುಕು’ ಗೋಷ್ಠಿಯಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ವಿ. ರಾಜಾರಾಂ, ಕಾಲೇಜು ಪ್ರಾಚಾರ್ಯ ಚನ್ನಬಸಪ್ಪ, ಪ್ರಾಧ್ಯಾಪಕ ರಾಜಪ್ಪ ದಳವಾಯಿ, ಮಾಜಿ ಶಾಸಕ ಎಸ್.ಎಂ.ನಾಗರಾಜ್ ಭಾಗವಹಿಸುವರು.

2 ಗಂಟೆಗೆ ನಡೆಯುವ ಕವಿಗೋಷ್ಠಿಯಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ನಾಗರಾಜ ಕಲ್ಕಟ್ಟೆ, ನಿವೃತ್ತ ಉಪನ್ಯಾಸಕ ಚಂದ್ರಮೌಳಿ, ಎಂ.ಒ. ಮಮತೇಶ್ ಮತ್ತಿತರರು ಕವನ ವಾಚಿಸುವರು. ಬಳಿಕ ‘ಸಾಹಿತ್ಯ ಮತ್ತು ಸಂಸ್ಕೃತಿ’ ಗೋಷ್ಠಿಯಲ್ಲಿ ಪ್ರಾಧ್ಯಾಪಕ ಎಸ್.ಎನ್. ಆನಂದ್, ನಿವೃತ್ತ ಪ್ರಾಚಾರ್ಯ ಕಮಲಮ್ಮ, ಪ್ರಾಧ್ಯಾಪಕ ನವಿಲೆಹಾಳ್ ದಾದಾಪೀರ್, ಮಾಜಿ ಶಾಸಕ ಜಿ.ಎಚ್. ಶ್ರೀನಿವಾಸ್ ಮತ್ತಿತರರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ತಾವರೆಕೆರೆ ಶಿಲಾಮಠದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಶಂಕರಪ್ಪ, ನಾಗರಾಜು ನಿರ್ಣಯ ಮಂಡನೆ ಮಾಡುವರು. ನಿವೃತ್ತ ಉಪನ್ಯಾಸಕ ಬಿ.ತಿಪ್ಪೇರುದ್ರಪ್ಪ ಸಮಾರೋಪ ಭಾಷಣ ಮಾಡುವರು ಎಂದು ಸಂಘಟಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.