ADVERTISEMENT

ಚಿಕ್ಕಮಗಳೂರು: ಕರಾರವೇ ಪ್ರೀಮಿಯರ್ ಲೀಗ್ ಕ್ರಿಕೆಟ್

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 4:41 IST
Last Updated 23 ಜನವರಿ 2026, 4:41 IST
ರಾಜ್ ಪ್ರಶಾಂತ್
ರಾಜ್ ಪ್ರಶಾಂತ್   

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ(ಕರಾರವೇ) ಪ್ರೀಮಿಯರ್ ಲೀಗ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫೆ.7, 8 ಮತ್ತು 9 ರಂದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಚ್.ಜಿ. ರಾಜ್‌ಪ್ರಶಾಂತ್ ಹೇಳಿದರು.

ಪ್ರಥಮ ಬಹುಮಾನ ₹50 ಸಾವಿರ, ದ್ವಿತೀಯ ಬಹುಮಾನ ₹20 ಸಾವಿರ, ತೃತೀಯ ಬಹುಮಾನ ₹8 ಸಾವಿರ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೊದಲು ನೋಂದಾಯಿಸಿದ 24 ತಂಡಗಳಿಗೆ ಮಾತ್ರ ಪಂದ್ಯಾವಳಿಯಲ್ಲಿ ಆಡಲು ಅವಕಾಶ ಇರುತ್ತದೆ. ಫೆ.3ರಂದು ತಂಡದ ಹೆಸರನ್ನು ನೋಂದಾಯಿಸಲು ಕೊನೆಯ ದಿನ. ಈಗಾಗಲೇ 12 ತಂಡಗಳು ಹೆಸರನ್ನು ನೋಂದಾಯಿಸಿವೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದವರು ತಂಡದಲ್ಲಿ ಆಯಾ ಹೋಬಳಿಯ ನಿವಾಸಿಯಾಗಿರಬೇಕು. ಬೇರೆ ಹೋಬಳಿಯವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಅವಕಾಶ ಇರುವುದಿಲ್ಲ. ನಗರ ಪ್ರದೇಶದವರು 3 ಏರಿಯಾಗಳ ಆಟಗಾರರನ್ನು ಮಾತ್ರ ತಂಡಗಳಲ್ಲಿ ಸೇರಿಸಿಕೊಳ್ಳಲು ಅವಕಾಶ ಇರುತ್ತದೆ ಎಂದರು.

ಪ್ರತಿ ಪಂದ್ಯಗಳಲ್ಲೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 90199 51837 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ನಿರ್ದೇಶಕ ಚಂದ್ರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.