ADVERTISEMENT

ಹರ್ಷ ಮೆಲ್ವಿನ್ ಲಸ್ರಾದೊಗೆ ‘ಕರ್ನಾಟಕ ಕ್ರೈಸ್ತ ರತ್ನ ಪ್ರಶಸ್ತಿ’ ಪ್ರದಾನ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 7:00 IST
Last Updated 6 ಡಿಸೆಂಬರ್ 2025, 7:00 IST
ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಗ್ರಾಮದ ದಾಸರಹಳ್ಳಿಯ ಹರ್ಷ ಮೆಲ್ವಿನ್ ಲಸ್ರಾದೊಗೆ ಕರ್ನಾಟಕ ಕ್ರೈಸ್ತ ರತ್ನ–2025 ಪ್ರಶಸ್ತಿ ನೀಡಿ ಗೌರವಿಸಲಾಯಿತು
ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಗ್ರಾಮದ ದಾಸರಹಳ್ಳಿಯ ಹರ್ಷ ಮೆಲ್ವಿನ್ ಲಸ್ರಾದೊಗೆ ಕರ್ನಾಟಕ ಕ್ರೈಸ್ತ ರತ್ನ–2025 ಪ್ರಶಸ್ತಿ ನೀಡಿ ಗೌರವಿಸಲಾಯಿತು   

ಮೂಡಿಗೆರೆ: ಬಣಕಲ್ ಸಮೀಪದ ದಾಸರಹಳ್ಳಿ ಗ್ರಾಮದ ಹರ್ಷ ಮೆಲ್ವಿನ್ ಲಸ್ರಾದೊ ಅವರಿಗೆ ‘ಕರ್ನಾಟಕ ಕ್ರೈಸ್ತ ರತ್ನ–2025’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಗಾಂಧಿ ಭವನದಲ್ಲಿ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ನಡೆದ ಕರ್ನಾಟಕ ಕ್ರೈಸ್ತರ ಮಹಾ ಸಮಾವೇಶ, 70ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಯಿತು.

ಇವರು ಬಣಕಲ್ ಕ್ರೈಸ್ತ ಅಭಿವೃದ್ಧಿ ಸಂಘಟನೆಯಲ್ಲಿ ತೊಡಗಿಸಿಕೊಂಡು, ಬಳಿಕ ಕ್ರೈಸ್ತರ ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ADVERTISEMENT

ಕಾರ್ಯಕ್ರಮದಲ್ಲಿ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪೃಥ್ವಿ ಲಾಲ್, ಸಂಸ್ಥಾಪಕ ಬಾಸ್ಕರ್ ಬಾಬು, ಪಾತರಪಲ್ಲಿ, ಸಮಾಜ ಸೇವಕ ಗುರುದಾಸ್, ವೆಂಕಟೇಶ್, ಕ್ರೈಸ್ತ ರಕ್ಷಣಾ ವೇದಿಕೆಯ ಪದಾಧಿಕಾರಿಗಳು, ವಿವಿಧ ಚರ್ಚ್‌ಗಳ ಧಾರ್ಮಿಕ ಗುರುಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.