ADVERTISEMENT

ಕಾಂಗ್ರೆಸ್ ಪಕ್ಷದಲ್ಲಿ ನಿರ್ದಿಷ್ಟತೆ ಇಲ್ಲ, ಎಡಬಿಡಂಗಿತನ ಕಾಣುತ್ತಿದೆ: ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 10:33 IST
Last Updated 14 ಏಪ್ರಿಲ್ 2021, 10:33 IST
ಸಿ.ಟಿ.ರವಿ
ಸಿ.ಟಿ.ರವಿ   

ಚಿಕ್ಕಮಗಳೂರು: ‘ಕೇರಳದಲ್ಲಿ ಕಮ್ಯುನಿಸ್ಟ್‌ ವಿರೋಧಿಸುವ ಕಾಂಗ್ರೆಸ್‌, ತಮಿಳುನಾಡು ಮತ್ತು ಪಶ್ಚಿಮಬಂಗಾಳದಲ್ಲಿ ಕಮ್ಯುನಿಸ್ಟರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಆ ಪಕ್ಷದಲ್ಲಿ ನಿರ್ದಿಷ್ಟತೆ ಇಲ್ಲ ಎಡಬಿಡಂಗಿತನ ಕಾಣಿಸುತ್ತಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ಗೆ ನಿರ್ದಿಷ್ಟ ತಾತ್ವಿಕ ತಳಹದಿ ಇಲ್ಲ. ಇಡೀ ದೇಶದಲ್ಲಿ ಪ್ರಭಾವ ಬೀರುವಂತಹ ನಾಯಕತ್ವವೂ ಆ ಪಕ್ಷದಲ್ಲಿ ಇಲ್ಲ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಯಾವ ಚುನಾವಣೆ ಗೆದ್ದಿದೆ ಹೇಳಿ? ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಜನನಾಯಕರು ಎನ್ನಲು ಸಾಧ್ಯವಿಲ್ಲ’ ಎಂದು ಲೇವಡಿ ಮಾಡಿದರು.

‘ಸಿದ್ದರಾಮಯ್ಯ, ಯಡಿಯೂರಪ್ಪ, ಮೋದಿ ಅವರನ್ನು ಜನನಾಯಕರು ಎಂದು ಒಪ್ಪಿಕೊಳ್ಳಬಹುದು’ ಎಂದರು.

‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಖಜಾನೆ ಖಾಲಿ ಮಾಡಿ, ₹ 2.47 ಲಕ್ಷ ಕೋಟಿ ಸಾಲ ಮಾಡಿಟ್ಟಿದ್ದರು. ಅವರು ಮನೆ ಮತ್ತು ಪಕ್ಷದ ಖಜಾನೆ ತುಂಬಿಸಿಕೊಂಡಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT