ಮೂಡಿಗೆರೆ: ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆಯು ಗುರುವಾರ ಮುಂದುವರಿಯಿತು.
ಮಳೆಯ ಬಿರುಸು ಕಡಿಮೆಯಾಗಿದ್ದರೂ, ಇಡೀ ದಿನ ಜಿಟಿ ಜಿಟಿಯಾಗಿ ಸುರಿಯಿತು.
ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಮರಬಿದ್ದು, ಧರೆ ಕುಸಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಜೆಸಿಬಿ ಯಂತ್ರದ ಮೂಲಕ ಮರ, ಮಣ್ಣನ್ನು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು. ವಾಹನಗಳು ಒಂದೇ ಬದಿಯಲ್ಲಿ ಸಾಗುತ್ತಿದ್ದರಿಂದ, ರಸ್ತೆಯ ಎರಡೂ ಕಡೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮೂಡಿಗೆರೆ - ಗೆಂಡೆಹಳ್ಳಿ ರಸ್ತೆಯಲ್ಲಿ ಮರ ಬಿದ್ದಿದ್ದರಿಂದ ಮೂಡಿಗೆರೆ ಬೇಲೂರು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.