ಮಳೆಯಿಂದಾಗಿ ಮರ ಬಿದ್ದಿರುವ ದೃಶ್ಯ
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಶನಿವಾರ ಬೆಳೆಗ್ಗೆಯಿಂದಲೂ ಧಾರಾಕಾರವಾಗಿ ಸುರಿಯುತ್ತಿದೆ.
ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ, ಹೊರನಾಡು, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಆಲ್ದೂರು, ಕೊಟ್ಟಿಗೆಹಾರ, ಜಾವಳಿ, ಬಣಕಲ್, ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿ, ಕೆಮ್ಮಣ್ಣುಗುಂಡಿ ಸುತ್ತಮುತ್ತ ಬಿರುಗಾಳಿ ಸಹಿತ ಧಾರಾಕಾರವಾಗಿ ಸುರಿಯುತ್ತಿದೆ.
ಮೂಡಿಗೆರೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ರಿಪುರ ಗ್ರಾಮದ ಶೋಭ ಎಂಬುವರ ಮನೆಯ ಮೇಲೆ ಮರಬಿದ್ದು ಹಾನಿಯಾಗಿದ್ದು, ಇದೇ ಗ್ರಾಮದ ಸುಶೀಲಾ ಎಂಬುವರ ಕಾರ್ ಶೆಡ್ ಹಾಗೂ ಮನೆಯ ಮೇಲೆ ಮರಬಿದ್ದು ಕಾರು ಜಖಂಗೊಂಡಿದೆ.
ಮಳೆಯೊಂದಿಗೆ ಗಾಳಿ ಬೀಸುತ್ತಿರುವುದರಿಂದ ಕಾಫಿ ತೋಟಗಳಲ್ಲಿ ಮರಗಳು ಉರುಳಿದ್ದು, ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಮಳೆ ಗಾಳಿಯಿಂದ ಹಲವೆಡೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.