ADVERTISEMENT

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ: ತುಂಬಿ ಹರಿಯುತ್ತಿದೆ ಶಿವನಿ ಕೆರೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 5:49 IST
Last Updated 3 ಡಿಸೆಂಬರ್ 2021, 5:49 IST
ಶಿವನಿ ಕೆರೆ ತುಂಬಿ ಹರಿಯುತ್ತಿರುವ ದೃಶ್ಯ
ಶಿವನಿ ಕೆರೆ ತುಂಬಿ ಹರಿಯುತ್ತಿರುವ ದೃಶ್ಯ    

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಶಿವನಿ ಸುತ್ತಮುತ್ತಲಿನ ಪ್ರದೇಶದಲ್ಲಿ ನಸುಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಶಿವನಿ ಕೆರೆ ತುಂಬಿ ಹರಿಯುತ್ತಿದೆ.

ಸೇತುವೆ ಮೇಲೆ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ತೋಟ, ಹೊಲಗಳಿಗೆ ನೀರು ನುಗ್ಗಿದೆ.

ನಸುಕಿನ 4 ಗಂಟೆಯಿಂದ 6 ಗಂಟೆವರೆಗೆ ಮಳೆ ಸುರಿಯಿತು. ಜಮೀನಿನಲ್ಲಿ ರಾಗಿ. ಮೆಕ್ಕೆ ಜೋಳ ಸಹಿತ ವಿವಿಧ ಬೆಳೆಗಳು ನೆಲಕಚ್ಚಿವೆ ಎಂದು ಗ್ರಾಮಸ್ಥ ಸದಾಶಿವ 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.