ನರಸಿಂಂಹರಾಜಪುರ: ಪಟ್ಟಣದ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನದ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆ ಸುರಿಯಿತು.
ಬುಧವಾರ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣವಿತ್ತು. ಮಧ್ಯಾಹ್ನ 3ರ ನಂತರ ಇದ್ದಕ್ಕಿದ್ದಂತೆ ಅರ್ಧ ಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆ ಸುರಿಯಿತು. ಬಳಿಕ, ಸ್ವಲ್ಪ ಹೊತ್ತು ಬಿಡುವು ನೀಡಿದ್ದ ಮಳೆ ಪುನಃ 4.30ರ ವೇಳೆಗೆ ಆರಂಭವಾಯಿತು.
ನಿರಂತರ ಸುರಿದ ಮಳೆಗೆ ಪಟ್ಟಣದ ಜೀವನ್ ಜ್ಯೋತಿ ಶಾಲೆ ಮುಂಭಾಗದ ಮುಖ್ಯರಸ್ತೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲಿ ನಿಂತಿತ್ತು. ಇದರಿಂದ ವಾಹನ ಸವಾರರು ಪರದಾಡಿದರು. ಸಂಜೆಯು ಸಹ ಮಳೆ ಮುಂದುವರೆದಿತ್ತು. ಶಾಲೆ ಬಿಡುವ ಸಮಯದಲ್ಲಿ ಮಳೆ ಸುರಿದಿದ್ದರಿಂದ ಮಕ್ಕಳು ಮನೆಗೆ ತೆರಳಲು ಪರದಾಡುವಂತಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.