ADVERTISEMENT

ಗುಡ್ಡ ಕುಸಿತ: ಚಾರ್ಮಾಡಿ ಘಾಟಿ ಮಾರ್ಗದಲ್ಲಿ 11ರವರೆಗೆ ವಾಹನ ಸಂಚಾರ ಬಂದ್‌

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 13:34 IST
Last Updated 7 ಆಗಸ್ಟ್ 2020, 13:34 IST
ಸಾಲುಗಟ್ಟಿ ನಿಂತಿರುವ ವಾಹನಗಳು
ಸಾಲುಗಟ್ಟಿ ನಿಂತಿರುವ ವಾಹನಗಳು    
""

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಇದೇ 11ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ತಿಳಿಸಿದ್ದಾರೆ.

‘ಮಳೆಯಿಂದಾಗಿ ಈ ಮಾರ್ಗದ ಕೆಲವೆಡೆ ಗುಡ್ಡದ ಮಣ್ಣು ಕುಸಿದಿದೆ. ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು, ಎಂಜಿನಿಯರ್‌ಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಕಾರ್ಯಾಚರಣೆ ನಿಟ್ಟಿನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಕರಾವಳಿ ಭಾಗಕ್ಕೆ ತಲುಪಲು ಈಗ ಕೊಟ್ಟಿಗೆಹಾರ– ಕಳಸ– ಕುದುರೆಮುಖ– ಕಾರ್ಕಳ ಮಾರ್ಗ ಅಥವಾ ಶಿರಾಡಿ ಘಾಟಿ (ಸಕಲೇಶಪುರ ಬಳಿ) ಮಾರ್ಗವಾಗಿ ಸಾಗಬೇಕು.

ADVERTISEMENT
ರಸ್ತೆಯಲ್ಲಿ ಕಾಣಿಸಿಕೊಂಡಿರುವ ಬಿರುಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.