ಆಲ್ದೂರು: ನಿರಂತರ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಸಮೀಪದ ದೊಡ್ಡ ಮಾಗರವಳ್ಳಿ ಪಂಚಾಯಿತಿ ವ್ಯಾಪ್ತಿಯ ಶಂಕರ್ ಫಾಲ್ಸ್ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.
ಈ ಹಿಂದೆ ಶಂಕರ್ ಫಾಲ್ಸ್ ವೀಕ್ಷಣೆಗೆ ಅವಕಾಶ ಇತ್ತು. ಅಲ್ಲಿ ಕೆಲ ಸಮಯದ ಹಿಂದೆ ಅವಘಡ ಹಾಗೂ ಅನೈತಿಕ ಚಟುವಟಿಕೆ ನಡೆಯುವ ಆರೋಪದ ಕಾರಣಕ್ಕೆ ಇಲ್ಲಿ ಪ್ರವಾಸಿಗರ ಭೇಟಿ ನಿಷೇಧಿಸಲಾಗಿತ್ತು.
ಅವಘಡ ಸಂಭವಿಸಿ ಹಲವು ವರ್ಷಗಳು ಕಳೆದಿವೆ. ಈಗ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಬೇಕು. ಫಾಲ್ಸ್ ಸುತ್ತಮುತ್ತ ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಒದಗಿಸಿಕೊಡಬೇಕು ಎಂದು ದೊಡ್ಡ ಮಾಗರವಳ್ಳಿ ಪಂಚಾಯಿತಿ ಸದಸ್ಯರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.