ADVERTISEMENT

ಕೋಡಿಹಳ್ಳಿ: ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ 51 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 16 ಮೇ 2021, 12:54 IST
Last Updated 16 ಮೇ 2021, 12:54 IST
   

ಚಿಕ್ಕಮಗಳೂರು: ತಾಲ್ಲೂಕಿನ ಅಂಬಳೆ ಹೋಬಳಿಯ ಕೋಡಿಹಳ್ಳಿಯಲ್ಲಿ ಕೋವಿಡ್‌ ದೃಢಪಟ್ಟಿದ್ದ ವ್ಯಕ್ತಿಯ ಶವಸಂಸ್ಕಾರದಲ್ಲಿ ಭಾಗಿಯಾಗಿದ್ದ 22 ಹಾಗೂ ಅವರ ಪ್ರಾಥಮಿಕ ಸಂಪರ್ಕದ 29 ಸೇರಿದಂತೆಒಟ್ಟು 51 ಮಂದಿಗೆ ಕೋವಿಡ್‌ ದೃಢಪಟ್ಟಿದೆ.

ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಅಂತ್ಯಸಂಸ್ಕಾರ ನಡೆದಿತ್ತು. ಸುಮಾರು 30 ಮಂದಿ ಪಾಲ್ಗೊಂಡಿದ್ದರು.

‘ಗ್ರಾಮದ ವ್ಯಕ್ತಿಯೊಬ್ಬರಿಗೆ ಕೋವಿಡ್‌ ಲಕ್ಷಣಗಳು ಇದ್ದವು, ಮಾದರಿಯನ್ನು ಪರೀಕ್ಷೆಗೆ ನೀಡಿದ್ದರು. ಆಟೋದಲ್ಲಿ ಆಸ್ಪತ್ರೆಗೆ ತೆರಳುವಾಗ ಆ ವ್ಯಕ್ತಿ ಮೃತಪಟ್ಟಿದ್ದರು. ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತ್ತು’ ಎಂದು ತಹಶೀಲ್ದಾರ್‌ ಡಾ.ಕೆ.ಜೆ.ಕಾಂತರಾಜ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಮೃತ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿತ್ತು. ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡವರು ಮತ್ತು ಅವರ ಪ್ರಾಥಮಿಕ ಸಂಪರ್ಕಿತರು ಮಾದರಿ ಪರೀಕ್ಷೆಗೆ ನೀಡಿದ್ದರು. 51 ಮಂದಿಗೆ ಕೋವಿಡ್‌ ಪತ್ತೆಯಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.